ಆಶಾ ಕಾರ್ಯಕರ್ತೆಗೆ ಸನ್ಮಾನ

| Published : Sep 10 2025, 01:04 AM IST

ಸಾರಾಂಶ

ಆಶಾ ಕಾರ್ಯಕರ್ತೆ ಶಿವಮ್ಮ ವಯೋನಿವೃತ್ತಿಗೊಂಡಿದ್ದು ಅವರನ್ನು ಸಂಜೀವಿನಿ ಒಕ್ಕೂಟದ ಸ್ವಸಹಾಯ ಸಂಘದ ಸದಸ್ಯರು ಗೌರವಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ನಾಕೂರು ಶಿರಂಗಾಲ ಪಂಚಾಯಿತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯಾಗಿ ಶಿವಮ್ಮ ಅವರು ಸೇವೆ ಸಲ್ಲಿಸುತ್ತಿದ್ದು ವಯೋನಿವೃತ್ತಿಗೊಂಡಿರುವ ಇವರನ್ನು ನಾಕೂರು ಗ್ರಾಮದ ಸಂಜೀವಿನಿ ಒಕ್ಕೂಟದ ಸ್ವ ಸಹಾಯ ಸಂಘದ ಸದಸ್ಯರು ಸನ್ಮಾನಿಸಿ ಗೌರವಿಸಿದರು. ಕಳೆದ 16 ವರ್ಷಗಳಿಂದ ನಾಕೂರು ಶಿರಂಗಾಲ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಅತ್ಯುತ್ತಮ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಬಿ ಎಸ್ ಶಿವಮ್ಮ ಅವರಿಗೆ ಸಂಜೀವಿನಿ ಒಕ್ಕೂಟದ ಬೆಳಕು ಮತ್ತು ಸಮುದ್ರ ಸಂಘದ ಸದಸ್ಯರು ಉತ್ತಮ ಸೇವೆಯನ್ನು ಪರಿಗಣಿಸಿ ಗ್ರಾಮದಲ್ಲಿ ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಎಂಬಿಕೆ ರಂಜಿನಿ, ಕೃಷಿಸಖಿ ಬ್ರಿಜಿತ್, ಸಂಘದ ಅಧ್ಯಕ್ಷರಾದ ಎ.ಪಿ.ಮೀನಾಕ್ಷಿ, ಹೆಚ್.ಎ.ರಶ್ಮಿ, ಉಪಾಧ್ಯಕ್ಷರು ಹಾಗೂ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

----------------------------------

ಕಾಲೇಜಿನ ಆವರಣದಲ್ಲಿ ರೀಲ್ಸ್: ವಿದ್ಯಾರ್ಥಿ ವಶಕ್ಕೆ

ಕನ್ನಡಪ್ರಭ ವಾರ್ತೆ ಕುಶಾಲನಗರಕಾಲೇಜು ವಿದ್ಯಾರ್ಥಿಯೊಬ್ಬ ಕಾಲೇಜಿನ ಆವರಣದಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ ಇನ್‌ಸ್ಟಾಗ್ರಾಮ್‌ ನಲ್ಲಿ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.ಕುಶಾಲನಗರ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ಪವನ್ ಎಂಬಾತ ಮಚ್ಚು ಹಿಡಿದು ತರಗತಿಯ ಮುಂದೆ ಓಡಾಟ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಗೊಂಡ ಬೆನ್ನಲ್ಲೇ ಕುಶಾಲನಗರ ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಿಸಿದರು.ತಾನು ತಪ್ಪು ಮಾಡಿರುವುದಾಗಿ ಕ್ಷಮಾಪಣೆ ಕೇಳಿದ ವಿದ್ಯಾರ್ಥಿ ಮುಂದೆ ಇಂತಹ ತಪ್ಪು ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿರುವುದಾಗಿ ತಿಳಿದು ಬಂದಿದೆ.