ಸಾರಾಂಶ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ ದೇವಲಾಪೂರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೂಪಾ ಪಾಟೀಲ ಅವರಿಗೆ ನೇಗಿಲ ಯೋಗಿ ರೈತ ಸಂಘದ ಜಿಲ್ಲಾಧ್ಯಕ್ಷ ಶಂಕರ ಬೋಳನ್ನವರ ಹಾಗೂ ಪತ್ನಿ ಶ್ವೇತಾ ಬೋಳನ್ನವರ ದಂಪತಿಯಿಂದ ವಿದ್ಯಾರ್ಥಿನಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು. ತಾಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ಸನ್ಮಾನಿಸಿದರು.
ಕನ್ನಡಪ್ರಭ ವಾರ್ತೆ ಬೈಲಹೊಂಗಲ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ ದೇವಲಾಪೂರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ರೂಪಾ ಪಾಟೀಲ ಅವರಿಗೆ ನೇಗಿಲ ಯೋಗಿ ರೈತ ಸಂಘದ ಜಿಲ್ಲಾಧ್ಯಕ್ಷ ಶಂಕರ ಬೋಳನ್ನವರ ಹಾಗೂ ಪತ್ನಿ ಶ್ವೇತಾ ಬೋಳನ್ನವರ ದಂಪತಿಯಿಂದ ವಿದ್ಯಾರ್ಥಿನಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು. ತಾಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ವಿದ್ಯಾರ್ಥಿನಿಗೆ ಸನ್ಮಾನಿಸಿದರು.ಈ ಸಂದರ್ಭದಲ್ಲಿ ನೇಗಿಲಯೋಗಿ ರೈತ ಸಂಘದ ಮುಖಂಡರಾದ ಮಹಾಂತೇಶ ಬೋಳನ್ನವರ, ಅನೀಲ ಗೀರನ್ನವರ, ಉಪನ್ಯಾಸಕ ರಮೇಶ ಯರಗಟ್ಟಿ, ಅದೃಶ್ಯಪ್ಪ ಹುಚ್ಚನ್ನವರ, ಶಂಕರಗೌಡ ಪಾಟೀಲ, ಬಸವರಾಜ ಜಂಬಗಿ, ಬಾಬು ಸಂಗೊಳ್ಳಿ ಹಾಗೂ ಪ್ರಭಾವತಿ ಕಡಬಿ, ವಿದ್ಯಾ ಯರಗಟ್ಟಿ, ಜ್ಯೋತಿ ಬೋಳನ್ನವರ ಸೇರಿದಂತೆ ಅನೇಕರು ಇದ್ದರು.ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಮಟ್ಟಕ್ಕೆ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ. ರಾಜ್ಯದಲ್ಲಿ ಗಂಡು ಮೆಟ್ಟಿದ ಬೈಲಹೊಂಗಲ ನಾಡಿನ ಕೀರ್ತಿ ಹೆಚ್ಚಿಸಿರುವುದು ಸಂತಸವಾಗಿದೆ. ನಮ್ಮ ನೇಗಿಲ ಯೋಗಿ ರೈತ ಸಂಘದಿಂದ ವಿದ್ಯಾರ್ಥಿನಿಗೆ ಪ್ರೋತ್ಸಾಹಿಸುವ ಸಲುವಾಗಿ ₹10 ಸಾವಿರ ಚೆಕ್ ವಿತರಿಸಲಾಗಿದೆ. ರೂಪಾ ಪಾಟೀಲ ಮಾಡಿರುವ ಸಾಧನೆ ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದೆ. ವಿದ್ಯಾರ್ಥಿನಿ ಮುಂದಿನ ಭವಿಷ್ಯ ಉಜ್ವಲವಾಗಲಿ. ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಲೆಂದು ಶುಭ ಹಾರೈಸುವೆ.
-ಶಂಕರ ಬೋಳನ್ನವರ, ನೇಗಿಲ ಯೋಗಿ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರು.