ರಾಜ್ಯ, ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ

| Published : Oct 14 2024, 01:17 AM IST

ರಾಜ್ಯ, ರಾಷ್ಟ್ರಮಟ್ಟದ ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆಗೊಂಡಿರುವ ಆಟಗಾರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಗಣ್ಯರು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ನಾವು ಪ್ರತಿಷ್ಠಾನ ಸಂಸ್ಥೆಯ ಯುವಿನ್ ಅಕಾಡೆಮಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ನಲ್ಲಿ ತರಬೇತಿ ಪಡೆದು ಕಾಲೇಜು ಹಂತದಲ್ಲಿ ರಾಜ್ಯ ಹಾಗು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಆಟಗಾರರನ್ನು ಮಹಿಳಾ ಸಮಾಜದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಸೋಮವಾರಪೇಟೆಯ ಅಕ್ಷಯ್ ಮುರುಳೀಧರ್, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಯಡೂರು ಗ್ರಾಮದ ಧನ್ಯ ಸತೀಶ್, ಪುಷ್ಪಂಜಲಿ ನಾಗೇಶ್, ಹಿರಿಕರ ಗ್ರಾಮದ ಜೀವಿತ ರಮೇಶ್, ಸೋಮವಾರಪೇಟೆಯ ಲಿಖಿತ್ ಕೃಪಾಲ್ ಅವರನ್ನು ಪೋಷಕರೇ ಸನ್ಮಾನಿಸಿ ಹಾರೈಸಿದರು.

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಅಕ್ಷಯ್, ಮುಂದೆ ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಧನ್ಯ, ಪುಷ್ಪಾಂಜಲಿ ಹಾಗು ಜೀವಿತ ಅವರು ಅ. 15ರಂದು ಮೈಸೂರು ಮಾನಸ ಗಂಗೋತ್ರಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ತಂಡವನ್ನು ಪ್ರತಿನಿಧಿಸಲಿದ್ದಾರೆ. ಲಿಖಿತ್ ಮಂಗಳೂರು ತಂಡವನ್ನು ಪ್ರತಿನಿಧಿಸಲಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗು ಕೋಚ್ ಗೌತಮ್ ಕಿರಗಂದೂರು ಹೇಳಿದರು.

ಪ್ರತಿಷ್ಠಾನದ ಕಾರ್ಯಕಾರಿ ನಿರ್ದೇಶಕಿ ಸುಮನಾ ಮ್ಯಾಥ್ಯೂ ಮಾತನಾಡಿ, ಮಕ್ಕಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕ ಹಾಗು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಇದು ಕಲಿಕೆಗೆ ಪೂರಕವಾಗಿದೆ ಎಂದು ಅಭಿಪ್ರಾಯಿಸಿದರು. ನಾವು ಪ್ರತಿಷ್ಠಾನ ದಿಂದ ದಸರಾ ಹಬ್ಬದ ರಜೆಯಲ್ಲಿ ‘ಬಾಲ್ಯ ಕಟ್ಟುವ ಮಕ್ಕಳ ಹಬ್ಬ’ ಹೆಸರಿನಲ್ಲಿ 7 ದಿನಗಳ ಕಾಲ ಮಹಿಳಾ ಸಮಾಜದಲ್ಲಿ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಜೀವನ ಕೌಶಲ್ಯಗಳ ಪರಿಚಯ, ಆರ್ಥಿಕ ಸಾಕ್ಷರತೆ, ನಿಸರ್ಗ ಪ್ರಜ್ಞೆ, ಪರಿಸರ ಕಾಳಜಿ, ಕನ್ನಡ, ಇಂಗ್ಲೀಷ್ ಭಾಷಾ ವ್ಯಾಕರಣದ ಬಗ್ಗೆ ಕಲಿಸಲಾಗುತ್ತಿದೆ ಎಂದು ಹೇಳಿದರು.

ಸಾಧಕ ಮಕ್ಕಳ ಪೋಷಕರಾದ ಎಸ್.ಎ.ಮುರುಳೀಧರ್, ಶಮಂತಾ ಕೃಪಾಲ್, ಭಾರತಿ ಸತೀಶ್, ರೇಣುಕಾ ರಮೇಶ್, ಯಡೂರು ನಾಗೇಶ್, ಸಾಹಿತಿಗಳಾದ ಶರ್ಮಿಳಾ ರಮೇಶ್, ಸಂಪನ್ಮೂಲ ವ್ಯಕ್ತಿ ಪದ್ಮಾವತಿ ಇದ್ದರು.