ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ . ಮಹಿಳೆಯರಿಗೆ ಸಮಾನ ಅವಕಾಶಗಳು ಸಿಗಬೇಕು ಹಾಗೂ ಅವರ ಶಿಕ್ಷಣ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ ಮಹಿಳೆಯರ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದೆ. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ಕುಟುಂಬದ ಜೊತೆಗೆ ಸಮಾಜವನ್ನೂ ಬಲಪಡಿಸುತ್ತಾರೆ ಎಂದರು.
ಕನ್ನಡಪ್ರಭ ವಾರ್ತೆ ಬೇಲೂರುಪಟ್ಟಣದ ಪುರಸಭೆಯ ವೇಲಾಪುರಿ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ . ಮಹಿಳೆಯರಿಗೆ ಸಮಾನ ಅವಕಾಶಗಳು ಸಿಗಬೇಕು ಹಾಗೂ ಅವರ ಶಿಕ್ಷಣ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ ಮಹಿಳೆಯರ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲಾಧಾರವಾಗಿದೆ. ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ಕುಟುಂಬದ ಜೊತೆಗೆ ಸಮಾಜವನ್ನೂ ಬಲಪಡಿಸುತ್ತಾರೆ ಎಂದರು. ಪುರಸಭೆ ಮಾಜಿ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಮಾತನಾಡಿ , ಮಹಿಳೆಯರು ಯಾವುದೇ ಕ್ಷೇತ್ರದಲ್ಲೂ ಹಿಂದುಳಿಯದೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ . ಮಹಿಳೆಯರ ಸೂಕ್ತ ಸ್ಥಾನಮಾನ ನೀಡುವ ಮೂಲಕ ಎಲ್ಲರೂ ಗೌರವಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆಯ ಮಹಿಳಾ ಸದಸ್ಯರು, ಪೌರ ಕಾರ್ಮಿಕರು, ಸದಸ್ಯ ಬಿ. ಗಿರೀಶ್, ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ, ಆರೋಗ್ಯಾಧಿಕಾರಿ ಲೋಹಿತ್ ಸೇರಿದಂತೆ ಇತರರು ಹಾಜರಿದ್ದರು.