ಸಾರಾಂಶ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ರಾಜ್ಯ ಮತ್ತು ಜಿಲ್ಲೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನ ಗಳಿಸಿ ಉತ್ತಮ ಸಾಧನೆ ತೋರಿದ್ದು ಶಾಲಾಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಇರ್ವರು ವಿದ್ಯಾರ್ಥಿಗಳು ರಾಜ್ಯ ಮತ್ತು ಜಿಲ್ಲೆಯಲ್ಲಿ ಪ್ರಥಮ ಮತ್ತು ತೃತೀಯ ಸ್ಥಾನಗಳನ್ನು ಗಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು ಶಾಲಾಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಪೋಷಕರಿಗೆ, ಶಿಕ್ಷಣದ ಶಾಲೆಗೆ ಹಾಗೂ ಊರಿಗೆ ಡಿಂಪಲ್ ತಿಮ್ಮಯ್ಯ ಸಿ.ಎನ್. 591 ಅಂಕ (ಶೇ. 98.05) ಪಡೆಯುವ ಮೂಲಕ ರಾಜ್ಯದಲ್ಲಿ 9ನೇ ಸ್ಥಾನ ಮತ್ತು ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದರು. ಮತೋರ್ವ ವಿದ್ಯಾರ್ಥಿನಿ ಸೃಜನ ಡಿ.ಡಿ. 587 (ಶೇ.97.83) ಪಡೆಯುವ ಮೂಲಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದು ಇವರು ಕೀರ್ತಿ ಪತಾಕೆಯನ್ನು ಏರಿಸಿದ್ದಾರೆ ಎಂದು ಸಂತ ಮೇರಿ ಸಂಯುಕ್ತ ಕಾಲೇಜಿನ ವ್ಯವಸ್ಥಾಪಕರಾದ ರೇ.ಫಾ.ವಿಜಯಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ರೂಪಗೊಳಿಸುವಲ್ಲಿ ಸಹಕಾರಿಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ರಾಜ್ಯಕ್ಕೆ 9 ನೇ ಸ್ಥಾನ ಪಡೆದ ಡಿಂಪಲ್ ತಿಮ್ಮಯ್ಯ ಸಿ.ಎನ್. 591 ಅಂಕ (ಶೇ 98.05) ಹಾಗೂ ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದ ಸೃಜನ ಡಿ.ಡಿ. 587 (ಶೇ.97.83) ವಿದ್ಯಾರ್ಥಿಗಳ ಪೋಷಕರೊಂದಿಗೆ ಗೌರವಿಸಿದರು.ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಸೇಲ್ವರಾಜ್, ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಇದ್ದರು.