ಸಾರಾಂಶ
ಹೊಸದುರ್ಗ ಪುರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಆಯ್ಕೆ ಸಂಬಂಧ ಇಂದು ( ಆ.21) ಚುನಾವಣೆ ನಡೆಯಲಿದ್ದು ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಬಹುತೇಕ ಬಿಜೆಪಿಯ ತೆಕ್ಕೆಗೆ ಬೀಳಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ 18 ನೇ ವಾರ್ಡನ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಂಕರಪ್ಪ, 19ನೇ ವಾಡ್ನ ಮೀಸಲು ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿರುವ ರಾಜೇಶ್ವರಿ ಅನಂದ್, ಬಿಸಿಎಂ (ಎ) ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸದಸ್ಯೆ ತಹೀರಾ ಬಾನು, ಬಿಜೆಪಿಯ ಜ್ಯೋತಿ ಕೆಂಚಪ್ಪ ಅರ್ಹರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಹೊಸದುರ್ಗ
ಹೊಸದುರ್ಗ ಪುರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಆಯ್ಕೆ ಸಂಬಂಧ ಇಂದು ( ಆ.21) ಚುನಾವಣೆ ನಡೆಯಲಿದ್ದು ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಬಹುತೇಕ ಬಿಜೆಪಿಯ ತೆಕ್ಕೆಗೆ ಬೀಳಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ 18 ನೇ ವಾರ್ಡನ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಂಕರಪ್ಪ, 19ನೇ ವಾಡ್ನ ಮೀಸಲು ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿರುವ ರಾಜೇಶ್ವರಿ ಅನಂದ್, ಬಿಸಿಎಂ (ಎ) ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸದಸ್ಯೆ ತಹೀರಾ ಬಾನು, ಬಿಜೆಪಿಯ ಜ್ಯೋತಿ ಕೆಂಚಪ್ಪ ಅರ್ಹರಾಗಿದ್ದಾರೆ.23 ಸದಸ್ಯ ಬಲ ಹೊಂದಿರುವ ಹೊಸದುರ್ಗ ಪುರಸಭೆಯಲ್ಲಿ ಬಿಜೆಪಿ 14, ಪಕ್ಷೇತರರರು 5, ಕಾಂಗ್ರೆಸ್ 4 ಸದಸ್ಯ ಬಲ ಹೊಂದಿದೆ. 14 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಮೊದಲ ಅವಧಿಯ ವೇಳೆ ಸ್ವಂತ ಬಲದ ಮೇಲೆ ಪುರಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಶ್ರೀನಿವಾಸ್ ಹಾಗೂ ಜ್ಯೋತಿ ಕೆಂಚಪ್ಪ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು. ಬಿಜೆಪಿಯಿಂದ ಗೂಳಿಹಟ್ಟಿ ಶೇಖರ್ ಶಾಸಕರಾಗಿದ್ದ ಕಾರಣಕ್ಕೆ ಬಿಜೆಪಿ ಸುಲಭವಾಗಿ ಅಧಿಕಾರ ನಡೆಸಿತ್ತು.
ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ತಾಲೂಕಿನ ಸಂಪೂರ್ಣ ಆಡಳಿತ ಕಾಂಗ್ರೆಸ್ ಶಾಸಕ ಬಿ.ಜಿ. ಗೋವಿಂದಪ್ಪ ಅವರ ಕೈಯಲ್ಲಿದೆ. ಪಕ್ಷೇತರ ಸದಸ್ಯರೆಲ್ಲರೂ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಜತೆಗೆ ಬಿಜೆಪಿಯ ಕೆಲವು ಸದಸ್ಯರು ಕಾಂಗ್ರೆಸ್ ಸಖ್ಯದಲ್ಲಿದ್ದಾರೆ. ಹಾಗಾಗಿ ಕಾಂಗ್ರೆಸ್ 4 ಸ್ಥಾನ ಹೊಂದಿದ್ದರೂ ಕಾಂಗ್ರೆಸ್ ಸದಸ್ಯ ಶಂಕರಪ್ಪ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನುವ ಮಾತುಗಲೂ ಕೇಳಿ ಬರುತ್ತಿದ್ದವು.ಆದರೆ ಚುನಾವಣೆಗೆ ಕ್ಷಣ ಗಣನೆ ಪ್ರಾರಂಭವಾಗುತ್ತಿದ್ದಂತೆ ಬಿಜೆಪಿಯ ಎಲ್ಲಾ ಸದಸ್ಯರು ಹಾಗೂ ಪಕ್ಷೇತರ ಸದಸ್ಯರು ಮತ್ತೆ ಒಂದಾಗಿದ್ದಾರೆ. ಅಲ್ಲದೆ ಈಗಾಗಲೇ ಬಿಜೆಪಿ ಸದಸ್ಯರು ಹಾಗೂ ಪಕ್ಷೇತರರು ಪ್ರವಾಸದಲ್ಲಿದ್ದಾರೆ. ಹಾಗಾಗಿ ಕಾಂಗ್ರೇಸ್ ಅಧಿಕಾರ ಹಿಡಿಯುವ ಎಲ್ಲಾ ಭರವಸೆಗಳು ಕ್ಷೀಣಿಸತೊಡಗಿವೆ.
ಅಲ್ಲದೇ ಉಳಿದಿರುವ 14 ತಿಂಗಳ ಅಧಿಕಾರಕ್ಕಾಗಿ ಬಹುಮತ ಪಡೆಯಲು ಸಾಧ್ಯವಾಗದಿದ್ದರಿಂದ ಶಾಸಕರೇ ಚುನಾವಣೆಯಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದರು ಎಂಬ ಮಾತುಗಳು ಕೇಳಿಬರುತ್ತಿವೆ. ಈಗಾಗಿ 2 ನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನ ಬಹುತೇಕವಾಗಿ ಅವಿರೋಧವಾಗಿ ಬಿಜೆಪಿಯ ಪಾಲಾಗುವ ಎಲ್ಲಾ ಲಕ್ಷಣಗಳು ಕಾಣತೊಡಗಿವೆ.