ದುಷ್ಕರ್ಮಿಗಳಿಂದ ಹೋಟೆಲ್ ನೌಕರನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

| Published : Sep 05 2024, 12:40 AM IST

ದುಷ್ಕರ್ಮಿಗಳಿಂದ ಹೋಟೆಲ್ ನೌಕರನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Share this Article
  • FB
  • TW
  • Linkdin
  • Email

ಸಾರಾಂಶ

ಜೀವನ್ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಸ್ಥಳೀಯರೇ ಇರಬಹುದೆಂದು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ .

ಕನ್ನಡಪ್ರಭ ವಾರ್ತೆ ಮದ್ದೂರು

ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹೋಟೆಲ್ ನೌಕರನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಹಣ ಮತ್ತು ಮೊಬೈಲ್ ದೋಚಿ ಹತ್ಯೆಗೆ ವಿಫಲ ಯತ್ನ ನಡೆಸಿರುವ ಘಟನೆ ಪಟ್ಟಣದ ಕೊಲ್ಲಿ ಸರ್ಕಲ್ ಬಳಿ ಮಂಗಳವಾರ ರಾತ್ರಿ ಜರುಗಿದೆ.

ಪಟ್ಟಣದ ಹಳೇ ಎಂ.ಸಿ.ರಸ್ತೆಯ ಸಿಪಾಯಿ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಜೀವನ್ (22) ತೀವ್ರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಹೋಟೆಲ್ ನೌಕರರು ಹಾಗೂ ಸಾರ್ವಜನಿಕರು, ತಲೆ ಮತ್ತು ಕೈಗೆ ತೀವ್ರವಾಗಿ ಪೆಟ್ಟು ಬಿದ್ದು ರಸ್ತೆ ಬದಿ ರಕ್ತದ ಮಡುವಿನಲ್ಲಿ ಪ್ರಜ್ಞಾಶೂನ್ಯನಾಗಿ ಬಿದ್ದಿದ್ದ ಜೀವನ್ ನನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜೀವನ್ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಸ್ಥಳೀಯರೇ ಇರಬಹುದೆಂದು ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ .ಮೂಲತಃ ತಾಲೂಕಿನ ಚಾಮನಹಳ್ಳಿಯ ಜೀವನ್ ಮಂಗಳವಾರ ರಾತ್ರಿ 11:30ರ ಸುಮಾರಿಗೆ ಹೋಟೆಲ್ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕೊಲ್ಲಿ ಸರ್ಕಲ್ ಬಳಿ ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು, ಜೀವನ್ ಮೇಲೆ ದಾಳಿ ನಡೆಸಿ ಆತನ ಜೇಬಿನಲ್ಲಿದ್ದ ಹಣ ಮತ್ತು ಮೊಬೈಲ್ ಲೂಟಿ ಮಾಡಿದ್ದಾರೆ.

ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಜೀವನ್ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡು ಮತ್ತು ದೊಣ್ಣೆಗಳಿಂದ ಹಲ್ಲೆ, ಕೊಲೆ ಮಾಡಲು ವಿಫಲ ಯತ್ನ ನಡೆಸಿದ್ದಾರೆ. ಘಟನೆ ಕಂಡು ಸಾರ್ವಜನಿಕರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಯ ಸಂಬಂಧ ಗಾಯಗೊಂಡಿರುವ ಜೀವನ್ ಸಂಬಂಧಿ ದಲಿತ ಮುಖಂಡ ಶಿವೇಂದ್ರ ಕುಮಾರ್ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.