ಹೊಸಕೋಟೆ: ತಾಲೂಕಿನ ನಂದಗುಡಿ ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ಮನೆ ಕಳ್ಳನನ್ನು ಬಂಧಿಸಿ, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಹೊಸಕೋಟೆ: ತಾಲೂಕಿನ ನಂದಗುಡಿ ಪೊಲೀಸರು ಮನೆಗಳಿಗೆ ಕನ್ನ ಹಾಕುತ್ತಿದ್ದ ಮನೆ ಕಳ್ಳನನ್ನು ಬಂಧಿಸಿ, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ವರ್ತೂರು ಹೋಬಳಿ ಸೋರಹುಣಸೆಯ ಶ್ರೀನಿವಾಸ್(24) ಬಂಧಿತ. ತರಕಾರಿ ವ್ಯಾಪಾರ ಮಾಡುತ್ತಿದ್ದ ಈತ ಕಳ್ಳತನವನ್ನೂ ರೂಢಿಸಿಕೊಂಡಿದ್ದ. ಈತನ ಮೇಲೆ ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ 1, ಕೋಲಾರ ಜಿಲ್ಲೆ ಮಾಲೂರು ಠಾಣೆಯಲ್ಲಿ 1 ಹಾಗೂ ಹೊಸಕೋಟೆ ತಾಲೂಕಿನ ನಂದಗುಡಿ ಠಾಣೆಯಲ್ಲಿ 3, ತಿರುಮಲ ಶೆಟ್ಟಿಹಳ್ಳಿ ಠಾಣೆಯಲ್ಲಿ 2 ಸೇರಿದಂತೆ ಒಟ್ಟು 7 ಕಳ್ಳತನ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದು ಪೊಲೀಸರಿಗೆ ಬೇಕಾಗಿದ್ದನು.

ಇತ್ತೀಚೆಗೆ ಹೊಸಕೋಟೆ ತಾಲೂಕಿನ ಮುಗಬಾಳ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡುವ ಸಂದರ್ಭದಲ್ಲಿ ನಂದಗುಡಿ ಪೊಲೀಸರು ಹಿಡಿದು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಪರ ಪೊಲೀಸ್ ಅಧೀಕ್ಷಕ ನಾಗರಾಜ್ ಮಾರ್ಗದರ್ಶನದಲ್ಲಿ ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಶಾಂತರಾಮ್, ಸಬ್ ಇನ್ಸ್‌ಪೆಕ್ಟರ್‌ ಗಂಗಪ್ಪ, ಸತ್ಯಣ್ಣ, ಸಿಬ್ಬಂದಿಗಳಾದ ಶ್ರೀಶೈಲ ಕೋಟಿ, ಸುಬ್ರಹ್ಮಣಿ, ಪ್ರವೀಣ್, ಪ್ರಸನ್ನ ಕಾರ್ಯನಿರ್ವಹಿಸಿದ್ದರು.

ಫೋಟೋ: 10 ಹೆಚ್‌ಎಸ್‌ಕೆ 4, 5

ಹೊಸಕೋಟೆ ತಾಲೂಕಿನ ನಂದಗುಡಿ ಪೊಲೀಸರು ಬಂಧಿತ ಆರೋಪಿಯಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ.