ಮನೆಗಳ್ಳರ ಬಂಧನ: 50 ಲಕ್ಷ ಮೌಲ್ಯದ ಚಿನ್ನಾಭರಣ ವಶ

| Published : Jan 14 2025, 01:03 AM IST

ಸಾರಾಂಶ

ಪ್ರಕರಣದ 1ನೇ ಆರೋಪಿ ಹಂಚ್ಯಾ ಗ್ರಾಮದ ಪ್ರಸಾದ್ ಈತನನ್ನು ದಸ್ತಗಿರಿ ಮಾಡಿ ಸುಮಾರು 516 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಶ್ರೀರಂಗಪಟ್ಟಣ: ವಿವಿಧ ಗ್ರಾಮಗಳಲ್ಲಿ ಮನೆಗಳಲ್ಲಿ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಬಂಧಿಸಿ ಸುಮಾರು 50 ಲಕ್ಷ ರು. ಬೆಲೆ ಬಾಳುವ 785 ಗ್ರಾಂ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರಿನ ಹಂಚ್ಯಾ ಗ್ರಾಮದ ಪ್ರಸಾದ್ ಹಾಗೂ ಮಹಮ್ಮದ್ ಬಂಧಿತರು.

ಕಳೆದ 2024ರ ನ.10 ರಂದು ತಾಲೂಕಿನ ನಗುವಿನಹಳ್ಳಿ ಪ್ರಕಾಶ್.ಎನ್ ಬಿನ್ ಲೇಟ್ ನಾರಾಯಣಪ್ಪ ವಾಸದ ಮನೆಗೆ ಕಳ್ಳರು ನುಗ್ಗಿ ಮನೆಯಲ್ಲಿಟ್ಟಿದ್ದ 50 ಲಕ್ಷ ರು. ಬೆಲೆಬಾಳುವ ಸುಮಾರು 785 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಬಿ.ಜಿ.ಕುಮಾರ್, ಪಿಎಸ್‌ಐ ರಕ್ಷಿತ, ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ ಹಾಗೂ ಸಿಬ್ಬಂದಿ ಶ್ರೀನಿವಾಸಮೂರ್ತಿ, ಹಫೀಜ್ ಪಾಷ, ದಿನೇಶ, ಶಂಕರ, ಮುತ್ತುರಾಜ, ಜೀಪ್ ಚಾಲಕ ರವೀಂದ್ರ ಜಿಲ್ಲಾ ಪೊಲೀಸ್ ಕಚೇರಿಯ ರವಿಕಿರಣ, ಲೋಕೇಶ ಅವರನ್ನೊಳಗೊಂಡ ತಂಡವನ್ನು ರಚನೆ ಮಾಡಿ ಆರೋಪಿಗಳ ಪತ್ತೆಗಾಗಿ ಕಾರ್ಯಪ್ರವೃತ್ತರಾಗಿದ್ದರು.

ಪ್ರಕರಣದ 1ನೇ ಆರೋಪಿ ಹಂಚ್ಯಾ ಗ್ರಾಮದ ಪ್ರಸಾದ್ ಈತನನ್ನು ದಸ್ತಗಿರಿ ಮಾಡಿ ಸುಮಾರು 516 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ತೆಗೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಜೊತೆಗೆ ಈ ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಮಹಮ್ಮದ್ ಮುನ್ನ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಯಿಂದ ಸುಮಾರು ಸುಮಾರು 155 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಕ್ಕೆ ತೆಗೆದುಕೊಂಡು. ಕೃತ್ಯಕ್ಕೆ ಬಳಸಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಮತ್ತು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಶ್ರಮಿಸಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಎಸ್ಪಿ ಪ್ರಶಂಸಿಸಿದ್ದಾರೆ.