ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ

| Published : Apr 24 2024, 02:17 AM IST

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಲಕ್ಷಾಂತರ ನಷ್ಟ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.

ಮದ್ದೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಬಿದ್ದು ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ತಾಲೂಕಿನ ವೈದ್ಯನಾಥಪುರ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಜರುಗಿದೆ.

ಮನೆಯಲ್ಲಿದ್ದ ಮಹಿಳೆ ಸೇರಿದಂತೆ ಕುಟುಂಬದ 7 ಮಂದಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯನಾಥಪುರ ದ ಶ್ರೀ ವೈದ್ಯನಾಥೇಶ್ವರ ದೇಗುಲದ ಹಿಂಭಾಗದ ರತ್ನಮ್ಮರಿಗೆ ಸೇರಿದ ನಾಡ ಹೆಂಚಿನ ಮನೆಗೆ ಬೆಳಗ್ಗೆ 10 ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಫ್ರಿಡ್ಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಕೆನ್ನಾಲಿಗೆ ರತ್ನಮ್ಮ ಅವರ ಇಬ್ಬರು ಮಕ್ಕಳು ವಾಸಿಸುತ್ತಿದ್ದ ಮನೆಗಳಿಗೆ ವ್ಯಾಪಿಸಿದೆ.

ಇದರಿಂದ ಮನೆಗಳಲ್ಲಿದ್ದ ಎರಡು ಫ್ರಿಡ್ಜ್, ವಿದ್ಯುತ್ ಉಪಕರಣ, ಧವಸಧಾನ್ಯ, ದಿನಬಳಕೆ ವಸ್ತುಗಳು ಹಾಗೂ ಮನೆಯ ಮೇಲ್ಚಾವಣಿಯ ಮರದ ತೊಲೆಗಳು ಬೆಂಕಿಯಿಂದ ಸುಟ್ಟು ಭಸ್ಮವಾಗಿವೆ. ಇದರಿಂದ ಸುಮಾರು 10 ಲಕ್ಷ ರೂ ಹಾನಿ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜು ಮಾಡಲಾಗಿದೆ.ಬೆಳಗ್ಗೆ ರತ್ನಮ್ಮ ಮನೆ ಮೇಲ್ಚಾವಣಿಯಿಂದ ಹೊಗೆ ಬರುತ್ತಿರುವುದನ್ನು ಕಂಡ ಗ್ರಾಮಸ್ಥರು ಆತಂಕಗೊಂಡು ಸ್ಥಳಕ್ಕೆದಾರಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ, ಬೇಸಿಗೆ ಬಿಸಿಲಿನ ಪ್ರಕರತೆಯಿಂದಾಗಿ ಬೆಂಕಿ ಇಡೀ ಮನೆಯನ್ನು ವ್ಯಾಪಿಸಿ ದ ಪರಿಣಾಮ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಬಳಿಕ ಸ್ಥಳಕ್ಕೆ ಧಾವಿಸಿದ ಮದ್ದೂರು ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಶಿವಾನಂದಯ್ಯ ನೇತೃತ್ವದಲ್ಲಿ ಸಿಬ್ಬಂದಿಗಳಾದ ವೆಂಕಟೇಶ ಅಭಿನಂದನ್, ಉತ್ತಮ್, ಮಾರುತಿ ಅವರುಗಳು ಸತತ 2 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.