ನಗರದ ಶಂಕರಪುರದ ಐದನೇ ಕ್ರಾಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ರೂಪಾ ಮತ್ತು ಆನಂದ್ ಅವರ ಮನೆಗೆ ಬೆಂಕಿ ತಗುಲಿ, ಮನೆಯಲ್ಲಿದ್ದ ಪೀಠೋಪಕರಣಗಳು, ಹಲವು ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ನಡೆದಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನಗರದ ಶಂಕರಪುರದ ಐದನೇ ಕ್ರಾಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ರೂಪಾ ಮತ್ತು ಆನಂದ್ ಅವರ ಮನೆಗೆ ಬೆಂಕಿ ತಗುಲಿ, ಮನೆಯಲ್ಲಿದ್ದ ಪೀಠೋಪಕರಣಗಳು, ಹಲವು ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಭಾನುವಾರ ನಡೆದಿದೆ.

ಘಟನೆಯ ಮಾಹಿತಿ ತಿಳಿದ ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ಟಿ.ರವಿ ಅವರು ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ಅವಘಡದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಧೈರ್ಯ ಹಾಗೂ ಸಾಂತ್ವನ ಹೇಳಿ, ಸಂಕಷ್ಟದ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದಂತೆ ಸಮಾಧಾನಪಡಿಸಿದರು.ಮನೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಕುರಿತು ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದುಕೊಂಡ ರವಿ ಅವರು, ಉಂಟಾಗಿರುವ ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕುಟುಂಬಕ್ಕೆ ಅಗತ್ಯವಿರುವ ಪೂರಕ ಸಹಕಾರವನ್ನು ನೀಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಸಂಕಷ್ಟದ ಸಂದರ್ಭದಲ್ಲಿ ಕುಟುಂಬದೊಂದಿಗೆ ನಿಂತು, ಅಗತ್ಯ ನೆರವು ದೊರೆಯುವಂತೆ ಸಂಬಂಧಪಟ್ಟವರೊಂದಿಗೆ ಸಮನ್ವಯ ಸಾಧಿಸುವುದಾಗಿ ತಿಳಿಸಿದರು.