ಮಾಕೋಡಿನಲ್ಲಿ ಮನೆಗೆ ಬೆಂಕಿ: ಲಕ್ಷಾಂತರ ರು. ನಷ್ಟ

| Published : Jun 24 2024, 01:36 AM IST

ಸಾರಾಂಶ

ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ವಿಠಲ ಗ್ರಾಮದ ಮಾಕೋಡಿನ ಸಜಿ ಎಂಬುವರ ಮನೆಗೆ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಮನೆಯಲ್ಲಿದ್ದ ದವಸ, ಧಾನ್ಯ, ಪಾತ್ರೆ, ಬೀರು, ಮಕ್ಕಳ ಪುಸ್ತಕ, ವಿದ್ಯುತ್ ಪರಿಕರ ,ಮನೆಯ ಮೇಲ್ಚಾವಣಿಯ ಹೆಂಚು ಸಂಪೂರ್ಣ ಸುಟ್ಟು ಹೋಗಿದೆ.

ನರಸಿಂಹರಾಜಪುರ: ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ವಿಠಲ ಗ್ರಾಮದ ಮಾಕೋಡಿನ ಸಜಿ ಎಂಬುವರ ಮನೆಗೆ ಭಾನುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಕಿ ಬಿದ್ದು ಮನೆಯಲ್ಲಿದ್ದ ದವಸ, ಧಾನ್ಯ, ಪಾತ್ರೆ, ಬೀರು, ಮಕ್ಕಳ ಪುಸ್ತಕ, ವಿದ್ಯುತ್ ಪರಿಕರ ,ಮನೆಯ ಮೇಲ್ಚಾವಣಿಯ ಹೆಂಚು ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿ ಅವಘಡದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಸುದ್ದಿ ತಿಳಿದ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್ ಶಾರ್ಟ ಸರ್ಕ್ಯೂಟ್ ಅಗ್ನಿ ಅವಗಡಕ್ಕೆ ಕಾರಣ ಎನ್ನಲಾಗಿದೆ. ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುನೀಲ್,ಪಿಡಿಒ ವಿಂದ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಸ್ಥಳಕ್ಕೆ ಭೇಟಿ ನೀಡಿ ಬೆಂಕಿಯಿಂದ ಮನೆ ಕಳೆದುಕೊಂಡ ಸಜಿ ಅವರಿಗೆ ವೈಯ್ಯಕ್ತಿಕವಾಗಿ 5 ಸಾವಿರ ರು. ನೆರವು ನೀಡಿದರು.