ದೇವನಹಳ್ಳಿ: ತಾಲೂಕಿನ ದಾಸರಹಳ್ಳಿ ಗ್ರಾಮದ ಮುನಿಯಮ್ಮನವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಹೊಸ ಮನೆ ನಿರ್ಮಿಸಿ ಅವರಿಗೆ ಹಸ್ತಾಂತರಿಸಲಾಯಿತು
ದೇವನಹಳ್ಳಿ: ತಾಲೂಕಿನ ದಾಸರಹಳ್ಳಿ ಗ್ರಾಮದ ಮುನಿಯಮ್ಮನವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ವಾತ್ಸಲ್ಯ ಕಾರ್ಯಕ್ರಮದಡಿ ಹೊಸ ಮನೆ ನಿರ್ಮಿಸಿ ಅವರಿಗೆ ಹಸ್ತಾಂತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಉಮಾರಬ್ಬ ಮಾತನಾಡಿ, ಪೂಜ್ಯ ಡಾ. ಡಿ.ವೀರೇಂದ್ರಹೆಗ್ಗಡೆ ಅವರು ಹಾಗೂ ಮಾತಶ್ಶ್ರೀ ಹೇಮಾವತಿ ಅಮ್ಮನವರ ಯೋಚನೆಯಂತೆ ನಿರ್ಗತಿಕ ಕುಟುಂಬಸ್ಥರನ್ನು ಆಯ್ಕೆ ಮಾಡಿ ಮನೆ ಕಟ್ಟಿಕೊಡುವ ಕೆಲಸ ಮಾಡಿಕೊಡಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಒಂದು ಸಾವಿರ ಮನೆ ನಿರ್ಮಾಣ ಮಾಡಿದ್ದು ತಾಲೂಕಿನಲ್ಲಿ ೩ ಮನೆಗಳನ್ನು ಇದುವರೆಗೆ ಕಟ್ಟಿ ಹಸ್ತಾಂತರಿಸಲಾಗಿದೆ ಎಂದರು. ಹಸ್ತಾಂತರ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ನರಸಿಂಹರಾಜು, ರಾಜಣ್ಣ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರವಿರಾಜ್‌ನಾಯಕ್, ಗ್ರಾಪಂ ಕಾರ್ಯದರ್ಶಿಗಳು, ದಾಸರಹಳ್ಳಿ ಭಾಗದ ಪಂಚಾಯಿತಿ ಮಾಜಿ ಸದಸ್ಯರು, ಯೋಜನೆಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.