ಸಾರಾಂಶ
ಬಿರುಸಿನ ಭಾರಿ ಮಳೆ, ಗಾಳಿಗೆ ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಮಾನಂಪಾಡಿ ಗ್ರಾಮದ ಜಾನಮ್ಮ ಎಂಬವರ ಮನೆಯ ಮಾಡಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ.
ಮೂಲ್ಕಿ: ಮೂಲ್ಕಿ ತಾಲೂಕು ವ್ಯಾಪ್ತಿಯಲ್ಲಿ ಸುರಿದ ಭಾರಿ ಮಳೆಗೆ ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಸುಮಾರು ನೂರು ವರ್ಷಗಳ ಇತಿಹಾಸವಿರುವ ಚಿತ್ರಾಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ಕಟ್ಟಡದಲ್ಲಿ ಬಿರುಕು ಉಂಟಾಗಿದ್ದು ಬೀಳುವ ಸ್ಥಿತಿಯಲ್ಲಿದೆ.
ಹಳೆ ಕಟ್ಟಡದ ಬದಿಯಲ್ಲಿ ಮಕ್ಕಳ ಶೌಚಾಲಯ ಹಾಗೂ ಸರ್ಕಾರಿ ಶಾಲೆಯ ನೂತನ ಕಟ್ಟಡವಿದ್ದು ಸುಮಾರು 40ಕ್ಕೂ ಹೆಚ್ಚು ಸಣ್ಣ ಮಕ್ಕಳು ವಿದ್ಯಾರ್ಜನೆ ನಡೆಸುತ್ತಿದ್ದು ಶಾಲೆಯ ಹಳೆ ಕಟ್ಟಡ ಅಪಾಯಕಾರಿಯಾಗಿ ಪರಿಣಮಿಸಿದೆ. ಹಳೆ ಕಟ್ಟಡದ ಅವಧಿ ಮುಗಿದಿದ್ದರೂ ಇದುವರೆಗೂ ತೆರವುಗೊಳಿಸದಿರುವ ಬಗ್ಗೆ ಶಿಕ್ಷಣಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಿರುಸಿನ ಭಾರಿ ಮಳೆ, ಗಾಳಿಗೆ ಮೂಲ್ಕಿ ನಗರ ಪಂಚಾಯಿತಿ ವ್ಯಾಪ್ತಿಯ ಮಾನಂಪಾಡಿ ಗ್ರಾಮದ ಜಾನಮ್ಮ ಎಂಬವರ ಮನೆಯ ಮಾಡಿನ ಮೇಲೆ ಮರ ಬಿದ್ದು ಭಾಗಶಃ ಹಾನಿಯಾಗಿರುತ್ತದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.