ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

| Published : Apr 24 2025, 12:05 AM IST

ಸಾರಾಂಶ

50 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾ ಹೊಸಹಳ್ಳಿಯಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: 50 ವರ್ಷದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾ ಹೊಸಹಳ್ಳಿಯಲ್ಲಿ ನಡೆದಿದೆ.

ಮೃತರನ್ನು ಅರುಣಾ ( 50 ವರ್ಷ) ಎಂದು ಗುರುತಿಸಲಾಗಿದೆ. ಮೃತರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ವಿಷ ಸೇವಿಸಿದ್ದಾರೆ ಎನ್ನಲಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.