ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಗೃಹಿಣಿ ಹತ್ಯೆ

| Published : Dec 15 2023, 01:30 AM IST

ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಗೃಹಿಣಿ ಹತ್ಯೆ
Share this Article
  • FB
  • TW
  • Linkdin
  • Email

ಸಾರಾಂಶ

ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು. ರಮ್ಯಾ ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಪೇಪರ್‌ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಭದ್ರಾವತಿ: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಲ್ಲಿ ಬುಧವಾರ ರಾತ್ರಿ ಪತಿಯೇ ಪತ್ನಿಯನ್ನು ಕೊಂದ ಘಟನೆ ನಡೆದಿದೆ.

ರಮ್ಯಾ (36) ಹತ್ಯೆಯಾದ ಗೃಹಿಣಿಯಾಗಿದ್ದು, ಪತಿ ನಾಗಭೂಷಣ್ ಹಂತಕ. ವೃತ್ತಿಯಲ್ಲಿ ನಾಗಭೂಷಣ ಆಟೋ ಚಾಲಕನಾಗಿದ್ದು, ಈ ದಂಪತಿಗೆ 16 ವಯಸ್ಸಿನ ಪುತ್ರ ಇದ್ದಾನೆ. ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು. ರಮ್ಯಾ ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ. ಪೇಪರ್‌ ಟೌನ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

- - - -ಡಿ14ಬಿಡಿವಿಟಿ4 ಮತ್ತು 4(ಎ):

ಹತ್ಯೆಯಾದ ಗೃಹಿಣಿ ರಮ್ಯಾ.