ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸವಾರ ವಶಕ್ಕೆ

| Published : Mar 01 2024, 02:16 AM IST

ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸವಾರ ವಶಕ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಬೈಕ್‌ನಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಚಿಕ್ಕ ಹುಡುಗನನ್ನು ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಮೇಲೆ ಹಲವು ಪ್ರಕರಣ ದಾಖಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುತ್ತಿದ್ದ ಅಪ್ರಾಪ್ತ ಸವಾರನನ್ನು ಎಚ್‌ಎಸ್ಆರ್‌ ಲೇಔಟ್‌ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಬುಧವಾರ ಎಚ್‌ಎಸ್‌ಆರ್‌ ಲೇಔಟ್‌ ಠಾಣಾ ವ್ಯಾಪ್ತಿಯ 19ನೇ ಮುಖ್ಯರಸ್ತೆಯ ಉಡುಪಿ ಹೋಟೆಲ್‌ ಬಳಿ ಅಪರಿಚಿತ ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್‌ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಸವಾರ ಅಪ್ರಾಪ್ತನಾಗಿದ್ದು, ಈ ಸಂಬಂಧ ಎಚ್‌ಎಸ್‌ಆರ್‌ ಲೇಔಟ್‌ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.