ಹಿಂದು ಸಮಾಜೋತ್ಸವ ಸಮಾವೇಶ ಇನ್ನೊಂದು ಧರ್ಮದ ವಿರುದ್ಧ ಸಮರ ಸಾರುವುದಕ್ಕೆ ಅಲ್ಲ, ನಮ್ಮಲ್ಲಿನ ಎಲ್ಲಾ ಜಾತಿಗಳನ್ನು ಒಗ್ಗೂಡಿಸಿಕೊಂಡು ಬಲಿಷ್ಠ ದೇಶ ಕಟ್ಟುವ ಕೆಲಸ ಮಾಡಲಾಗುತ್ತಿದೆ.
ಕನ್ನಡಪ್ರಭ ವಾರ್ತೆ ಕೋಲಾರದೇಶದಲ್ಲಿ ಹಿಂದೂ ಸಮಾಜವನ್ನು ಒಗ್ಗೂಡಿಸುವ ಸಲುವಾಗಿ ಜ. 31ರಂದು ಕೋಲಾರದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಇದು ಬಲಿಷ್ಟ ರಾಷ್ಟ್ರ ನಿರ್ಮಾಣದ ಸದುದ್ದೇಶವೂ ಆಗಿದೆ ಎಂದು ಹಿಂದು ಸಮಾಜೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್.ವೆಂಕಟೇಶ್ ಮತ್ತು ಕಾರ್ಯದರ್ಶಿ ಉದಯ್‌ಕುಮಾರ್ ಹೇಳಿದರು. ಪತ್ರಕರ್ತರ ಭವನದಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಹಿಂದು ಸಮಾಜೋತ್ಸವ ಸಮಾವೇಶ ಇನ್ನೊಂದು ಧರ್ಮದ ವಿರುದ್ಧ ಸಮರ ಸಾರುವುದಕ್ಕೆ ಅಲ್ಲ, ನಮ್ಮಲ್ಲಿನ ಎಲ್ಲಾ ಜಾತಿಗಳನ್ನು ಒಗ್ಗೂಡಿಸಿಕೊಂಡು ಬಲಿಷ್ಠ ದೇಶ ಕಟ್ಟುವ ಕೆಲಸ ಮಾಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಈ ಹಿಂದೂ ಸಮಾಜೋತ್ಸವ ಸಮಾವೇಶ ಇಡೀ ದೇಶದಲ್ಲಿ ಒಂದೊಂದು ಹೆಸರಿನಲ್ಲಿ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಕೋಲಾರದಲ್ಲಿ ಜ. 31ರಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಹಿಂದು ಸಮಾಜೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅದಕ್ಕೂ ಮುನ್ನಾ ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಯಾತ್ರೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಬಿ.ಎಸ್.ವೆಂಕಟೇಶ್ ವಹಿಸಲಿದ್ದಾರೆ. ಸಮಾರಂಭದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಥಕ ಸಂಘದ ಅಧ್ಯಕ್ಷ ಪ್ರಭಾಕರ್ ಭಟ್ ಕಲ್ಲಡ್ಕ ಭಾಷಣ ಮಾಡಲಿದ್ದಾರೆ.
ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥನ ಮಠದ ಶ್ರೀ ತೇಜಲಿಂಗ ಶಿವಾಚಾರ್ಯ ಸ್ವಾಮೀಜಿ, ಚೊಕ್ಕಹಳ್ಳಿಯ ಚಿನ್ಮಯ ಸಾಂದೀಪನಿ ಆಶ್ರಮದ ಶ್ರೀ ದತ್ತಪಾದಾನಂದ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಹಿಂದೂ ಸಮಾಜೋತ್ಸವ ಸಮಾವೇಶ ಯಶಸ್ವಿಗಾಗಿ ಜ. 15ರಂದು ಕೋಲಾರ ನಗರದ ಎಲ್ಲಾ ವಾರ್ಡ್‌ಗಳಲ್ಲಿ ಮಹಾ ಸಂಪರ್ಕ ದಿನವಾಗಿ ಆಚರಣೆ ಮಾಡಲಾಗುವುದು. ಜ.18ರಂದು ಕೋಲಾರದ ಕಠಾರಿಪಾಳ್ಯದ ಬಿಂದುಮಾಳ್ಯಂ ಛತ್ರದಲ್ಲಿ ಮಾತೃ ಸಮಾವೇಶ ನಡೆಯಲಿದೆ. ಜ.29ರಂದು ಕೋಲಾರ ನಗರದಲ್ಲಿ ಶೋಭಾಯತ್ರೆ ನಡೆಯುವ ಮಾರ್ಗದಲ್ಲಿ ಬೈಕ್ ರ್‍ಯಾಲಿ ನಡೆಯಲಿದೆ ಎಂದರು.ಕೋಲಾರ ಗ್ರಾಮಾಂತರದಲ್ಲಿ ಹಿಂದೂ ಸಮಾಜೋತ್ಸವ:ಕೋಲಾರ ಕಸಬಾ, ಹುತ್ತೂರು, ಹೊಳೂರು, ವಕ್ಕಲೇರಿ ಹೋಬಳಿ ಮಟ್ಟದ ಹಿಂದೂ ಸಮಾಜೋತ್ಸವ ಸಮಾವೇಶ ಜ.18ರಂದು ಕೋಲಾರದ ಎಪಿಎಂಸಿ ಯಾರ್ಡ್ ಪಕ್ಕದಲ್ಲಿರುವ ಕೃಷ್ಣ ಕನ್ವನ್‌ಷೆನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಜಯರಾಮ್ ಬೊಳ್ಳಾಜೆ ಪ್ರಾಂತ ಸಂಯೋಜಕ ಪರ್ಯಾವರಣ್ ಗತಿವಿಧಿ ಮಾತನಾಡಲಿದ್ದಾರೆ.ಕೋಲಾರ ತಾಲೂಕಿನ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥನ ಮಠದ ಶ್ರೀ ತೇಜಲಿಂಗ ಶಿವಾಚಾರ್ಯ ಸ್ವಾಮೀಜಿ, ಚಿಕ್ಕಹಳ್ಳಿಯ ಚಿನ್ಮಯ ಸಾಂದೀಪನಿ ಆಶ್ರಮ ಚೊಕ್ಕಹಳ್ಳಿಯ ಚಿನ್ಮಯ ಸಾಂದೀಪನಿ ಆಶ್ರಮದ ಶ್ರೀ ದತ್ತಪಾದಾನಂದ ಸ್ವಾಮೀಜಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೂ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಬಿ.ಎಸ್.ವೆಂಕಟೇಶ್ ವಹಿಸಿಕೊಳ್ಳಲಿದ್ದಾರೆ. ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ಜ. 25ರಂದು ಹೋಬಳಿ ಮಟ್ಟದ ಹಿಂದೂ ಸಮಾಜೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಹೇಶ್ ಕಡಗದಾಳು ಮುಖ್ಯ ಭಾಷಣಕಾರರು ಆಗಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆ ನಿವೃತ್ತ ಶಾಲಾ ಶಿಕ್ಷಕ ಬಿ.ಎಂ.ಹನುಮಂತಪ್ಪ ವಹಿಸಿಕೊಳ್ಳಲಿದ್ದಾರೆ.
ಕೋಲಾರ ತಾಲೂಕಿನ ನಾಗಲಾಪುರ ವೀರಧರ್ಮ ಸಿಂಹಾಸನ ಸಂಸ್ಥನ ಮಠದ ಶ್ರೀ ತೇಜಲಿಂಗ ಶಿವಾಚಾರ್ಯ ಸ್ವಾಮೀಜಿ, ಕೋಲಾರ ತಾಲೂಕಿನ ಚೊಕ್ಕಹಳ್ಳಿಯ ಚಿನ್ಮಯ ಸಾಂದೀಪನಿ ಆಶ್ರಮದ ಶ್ರೀ ದತ್ತಪಾದಾನಂದ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಹಿಂದೂ ಸಮಾಜೋತ್ಸವ ಸಮಿತಿಯ ಅಧ್ಯಕ್ಷ ಬಿ.ಎಸ್.ವೆಂಕಟೇಶ್ ವಹಿಸಿಕೊಳ್ಳಲಿದ್ದಾರೆ. ಈ ಮೂರು ಕಾರ್ಯಗಳಿಗೆ ಎಲ್ಲಾ ಹಿಂದೂ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಚೊಕ್ಕಹಳ್ಳಿಯ ಚಿನ್ಮಯ ಸಾಂದೀಪನಿ ಆಶ್ರಮದ ಶ್ರೀ ದತ್ತಪಾದಾನಂದ ಸ್ವಾಮೀಜಿ, ಡಾ.ಜನಾರ್ಧನ್, ವೆಂಕಟಾಚಲಪತಿ, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್, ಚಂದ್ರಣ್ಣ, ಮುನಿಚಿನ್ನಪ್ಪ, ಪ್ರಭು, ರವಿಶಾಸ್ತ್ರೀ ಇದ್ದರು.