ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣರವರ ಹುಟ್ಟುಹಬ್ಬದ ಕೊಡುಗೆಯಾಗಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿ ಉದ್ಯೋಗ ಆಕಾಂಕ್ಷಿಗಳಿಗೆ ನೆರವಾಗುತ್ತಿದ್ದು, ವಿದ್ಯಾವಂತ ನಿರುದ್ಯೋಗಿ ಯುವ ಜನಾಂಗ ಇದರ ಸದ್ಬಳಕೆ ಮಾಡಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ ತಿಳಿಸಿದರು.
ಕನ್ನಡಪ್ರಭವಾರ್ತೆ ಮಧುಗಿರಿ
ಕ್ಷೇತ್ರದ ಶಾಸಕ ಕೆ.ಎನ್.ರಾಜಣ್ಣರವರ ಹುಟ್ಟುಹಬ್ಬದ ಕೊಡುಗೆಯಾಗಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿ ಉದ್ಯೋಗ ಆಕಾಂಕ್ಷಿಗಳಿಗೆ ನೆರವಾಗುತ್ತಿದ್ದು, ವಿದ್ಯಾವಂತ ನಿರುದ್ಯೋಗಿ ಯುವ ಜನಾಂಗ ಇದರ ಸದ್ಬಳಕೆ ಮಾಡಿಕೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ ತಿಳಿಸಿದರು.ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧುಗಿರಿ ತಾಲೂಕು ರಾಯಲ್ ಸೀಮೆ ಬರಪೀಡಿತ ಪ್ರದೇಶ, ಸ್ಥಳೀಯ ವಿದ್ಯಾವಂತ ನಿರುದ್ಯೋಗಿ ಯುವಕ -ಯುವತಿಯರಿಗೆ ಸದಾವಕಾಶವಕಾಶ ಸೃಷ್ಠಿಸುವ ಉದ್ದೇಶದಿಂದ ಈ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 75ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಉದ್ಯೋಗ ಅರಸುವ ಯುವಜನತೆಗೆ ಇದು ಸದವಕಾಶ ಎಂದರು.
15ರಂದು ಬೆಳಿಗ್ಗೆ 9-30ರಿಂದ ಪ್ರಾಂರಭವಾಗಲಿದ್ದು ,ಈಗಾಗಲೇ ಆನ್ ಲೈನಲ್ಲಿ 1800ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಉದ್ಯೋಗ ಮೇಳವು ದೊಡ್ಡ ಮಟ್ಟದಲ್ಲಿ ಆಯೋಜನೆಗೊಂಡಿದ್ದು, ಸುಮಾರು ಎರಡುವೂರೆ ಸಾವಿರಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉದ್ಯೋಗ ದೊರಕುವ ನಿರೀಕ್ಷೆ ಇದೆ. ವಿವಿಧ ಕ್ಷೇತ್ರಗಳ ಕಂಪನಿಗಳು ಭಾಗವಹಿಸುವುದರಿಂದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಲಭ್ಯವಿದೆ. ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ, ಮಾರ್ಗದರ್ಶನ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದ್ದು, ಭಾಗವಹಿಸುವವರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.ಗೋಷ್ಠಿಯಲ್ಲಿ ಎಸಿ ಗೊಟೂರು ಶಿವಪ್ಪ, ತಹಸೀಲ್ದಾರ್ ಶ್ರೀನಿವಾಸ್, ಡಿವೈಎಸ್ಪಿ ಮಂಜುನಾಥ್, ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಜಿ.ಜೆ. ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಯ್ಯ, ಆದಿನಾರಾಯಣ್ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ. ನಂಜುಂಡರಾಜು, ಲಾಲಪೇಟೆ ಮಂಜುನಾಥ್, ಎನ್. ಗಂಗಣ್ಣ, ಸದಸ್ಯರಾದ ಮಂಜುನಾಥ್ ಆಚಾರ್, ಎಂ. ಶ್ರೀಧರ್, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಕುಮಾರ್, ಬಸವರಾಜು ರಾಮಚಂದ್ರಪ್ಪ, ,ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಮಂಜುನಾಥ್, ಮುಖಂಡರಾದ ಹರ್ಷ, ವೀರೇಶ್, ಕಿಶೋರ್, ದೀಪಕ್ ಹೊನ್ನಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.