ಸಾರಾಂಶ
- ನೂರಾರು ಕಂಪನಿಗಳು ಭಾಗಿ, ದಾವಣಗೆರೆ ಯುವಜನರಿಗೆ ಸುವರ್ಣಾವಕಾಶ - - - ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಸಹಯೋಗದಲ್ಲಿ ಮಾ.15ರಂದು ನಗರದ ಹದಡಿ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ಉಪಸ್ಥಿತರಿರುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ., ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್. ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ. ಶ್ರೀನಿವಾಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ರಾಜ್ಯ ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವ ನಾಯ್ಕ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ರಾಷ್ಟ್ರಿಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕ ಪಿ.ಐ. ಶ್ರೀವಿದ್ಯಾಶ್ರೀ, ವ್ಯವಸ್ಥಾಪಕ ನಿರ್ದೇಶಕ ಡಾ.ರಾಗಪ್ರಿಯ ಆರ್., ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಪಂ ಸಿಇಒ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶಿವಕುಮಾರ ಮಲ್ಲಾಡದ, ಐಟಿಐ ಕಾಲೇಜಿನ ಪ್ರಾಚಾರ್ಯ ಎನ್.ಏಕನಾಥ ಭಾಗವಹಿಸುವರು.