ಪಿಜಿ ವೈದ್ಯೆ ಕೊಲೆ ಖಂಡಿಸಿ ಬೃಹತ್‌ ಪ್ರತಿಭಟನೆ

| Published : Aug 18 2024, 01:51 AM IST / Updated: Aug 18 2024, 01:52 AM IST

ಸಾರಾಂಶ

ಪಿಜಿ ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ.

ಹೊಸಪೇಟೆ: ಕೊಲ್ಕತ್ತಾದಲ್ಲಿ ಪಿಜಿ ವೈದ್ಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ವೈದ್ಯಕೀಯ ಕಾಲೇಜಿನಲ್ಲೇ ಪಿಜಿ ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ. ಕೂಡಲೇ ಈ ಅತ್ಯಾಚಾರಿಗಳು ಹಾಗೂ ಕೊಲೆ ಗಡುಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವೈದ್ಯರ ರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಧಾವಿಸಬೇಕು. ಇಂತಹ ದುರ್ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ದೇಶಾದ್ಯಂತ ನಡೆದ ಪ್ರತಿಭಟನೆಯಲ್ಲಿ ಜಿಲ್ಲೆಯಲ್ಲಿ ಖಾಸಗಿ ವೈದ್ಯರು ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿದ್ದರು. ಇದರಿಂದ ಸರ್ಕಾರಿ ವೈದ್ಯರು ಕರ್ತವ್ಯದಲ್ಲೇ ಪ್ರತಿಭಟನೆ ನಡೆಸಿದರು. ಇನ್ನೂ ಆಸ್ಪತ್ರೆಗಳಿಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ಕೂಡ ನೀಡಿದರು. ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದರಿಂದ ಜಿಲ್ಲೆಯಲ್ಲಿ ಸಮಸ್ಯೆ ಉಂಟಾಗದಂತೆ ಕ್ರಮವಹಿಸಲಾಗಿತ್ತು.

ಸಂಘದ ಪದಾಧಿಕಾರಿಗಳಾದ ಡಾ. ಎಲ್.ಆರ್‌. ಶಂಕರ್ ನಾಯ್ಕ, ಡಾ. ಬಿ. ಜಂಬಯ್ಯ, ಡಾ. ಸೋಮಶೇಖರ್ ಕಬ್ಬೇರ್, ಡಾ. ಭಾಸ್ಕರ್‌ ಸೇರಿ್ದಂತೆ ಮತ್ತಿತರರಿದ್ದರು.