ಸಾರಾಂಶ
ಹೊಸಪೇಟೆಯಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಗಮಿಸಿದ್ದು ಲಕ್ಷಾಂತರ ಕಾರ್ಯಕರ್ತರು ಮರಳಿ ತಮ್ಮೂರಿಗೆ ಹೋಗುವಾಗ ಅಮ್ಮನವರ ದರ್ಶನ ಪಡೆಯಲು ಹುಲಿಗಿಗೆ ಆಗಮಿಸಿದ್ದರು.
ಮುನಿರಾಬಾದ್:
ರಭಸದಿಂದ ಸುರಿಯುತ್ತಿರುವ ಮಳೆಯ ನಡುವೆಯೇ ಮಂಗಳವಾರ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ 2 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದರು. ಮಧ್ಯಾಹ್ನ 12 ಗಂಟೆಗೆ ಭಕ್ತರ ಸಂಖ್ಯೆ ಒಂದು ಲಕ್ಷ ದಾಟಿತು. ಸಂಜೆ 4 ಗಂಟೆಯ ಹೊತ್ತಿಗೆ ದರ್ಶನ ಪಡೆದ ಭಕ್ತರ ಸಂಖ್ಯೆ 2 ಲಕ್ಷ ದಾಟಿತು.ಮಂಗಳವಾರ ಬೆಳಗ್ಗೆ 11 ಗಂಟೆಯಿಂದ 1 ಗಂಟೆ ವರೆಗೆ ಮುನಿರಾಬಾದ್, ಹುಲಿಗಿ, ಹೊಸಪೇಟೆ, ಮರಿಯಮ್ಮನಹಳ್ಳಿ ಹಾಗೂ ಸುತ್ತಮುತ್ತಲಿನಲ್ಲಿ ಭಾರಿ ಮಳೆ ಆಗಿದೆ. ಇದನ್ನು ಲೆಕ್ಕಿಸದೆ ಭಕ್ತರು ಅಮ್ಮನವರ ದರ್ಶನಕ್ಕಾಗಿ ಸಾಲಿನಲ್ಲಿ ನಿಂತು ಭಕ್ತಿ ಪ್ರದರ್ಶಿಸಿದರು.
ಹೊಸಪೇಟೆಯಲ್ಲಿ ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಆಗಮಿಸಿದ್ದು ಲಕ್ಷಾಂತರ ಕಾರ್ಯಕರ್ತರು ಮರಳಿ ತಮ್ಮೂರಿಗೆ ಹೋಗುವಾಗ ಅಮ್ಮನವರ ದರ್ಶನ ಪಡೆಯಲು ಹುಲಿಗಿಗೆ ಆಗಮಿಸಿದ್ದರು.ಹುಲಿಗಮ್ಮ ದೇವಿ ಜಾತ್ರಾ ಮಹೋತ್ಸವ ಮಂಗಳವಾರದಿಂದ ಪ್ರಾರಂಭವಾಗಿದ್ದು ಸಂಜೆ ಲಘು ರಥೋತ್ಸವ ನಡೆಯಿತು. ಬುಧವಾರ ಮಹಾ ರಥೋತ್ಸವ ನಡೆಯಲಿದೆ.