ಹುಳ್ಳೇನಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ

| Published : Oct 07 2025, 01:02 AM IST

ಹುಳ್ಳೇನಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಗಡಿ: ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಮತ ಉಪಾಧ್ಯಕ್ಷರಾಗಿ ತಾನ್ ಜಿನ್ ಖಾನ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಶೋಕ್ ತಿಳಿಸಿದ್ದಾರೆ.

ಮಾಗಡಿ: ತಾಲೂಕಿನ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮಮತ ಉಪಾಧ್ಯಕ್ಷರಾಗಿ ತಾನ್ ಜಿನ್ ಖಾನ್ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಶೋಕ್ ತಿಳಿಸಿದ್ದಾರೆ.

ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಒಂದೊಂದೇ ನಾಮಪತ್ರ ಬಂದದ್ದರಿಂದ ಮುಂದಿನ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರು ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷ ಮಮತಾ ಮಾತನಾಡಿ, ಶಾಸಕ ಎಚ್.ಸಿ.ಬಾಲಕೃಷ್ಣ, ಬಮೂಲ್ ನಿರ್ದೇಶಕ ಎಚ್.ಎನ್.ಅಶೋಕ್ ಸಹಕಾರ ಹಾಗೂ ಸದಸ್ಯರ ಬೆಂಬಲದಿಂದ ಅವಿರೋಧವಾಗಿ ಆಯ್ಕೆಯಾಗಿದ್ದು ಅವರಿಗೆ ಕೃತಜ್ಞತೆಗಳನ್ನು ತಿಳಿಸುತ್ತೇನೆ. ಗ್ರಾಮಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇವೆ. ನರೇಗಾ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿ ಮಾದರಿಯಾಗಿ ಮಾಡುವ ಮಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದರು.

ಅಧ್ಯಕ್ಷ ಉಪಾಧ್ಯಕ್ಷರು ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿಮಾನಿ ಒಬ್ಬರು ₹ 100, 10, 20 ರು.ಗಳ ನೋಟನ್ನು ನಿವಾಲಿಸಿ ಮೇಲೆ ಎಸೆದು ಅಭಿಮಾನ ವ್ಯಕ್ತಪಡಿಸಿದ್ದ ಘಟನೆ ನಡೆಯಿತು.

ಇದೇ ವೇಳೆ ಗ್ರಾಪಂ ಸದಸ್ಯರಾದ ಅರವಿಂದ, ನಾರಾಯಣ, ಪದ್ಮ, ಅನುಸೂಯಮ್ಮ, ರೇಖಾ, ಶಿರೀನ್ ತಾಜ್, ರಾಧಾ, ದಕ್ಷಿಣ ಮೂರ್ತಿ, ದೌಲತ್ ಪಾಷಾ, ಹಬೀಬ್ ಉಲ್ಲಾ, ಶ್ರೀನಿವಾಸಯ್ಯ ಸೇರಿದಂತೆ ಹುಳ್ಳೇನಹಳ್ಳಿ ಗ್ರಾಮದ ಹಿರಿಯ ಮುಖಂಡರು ಅಭಿನಂದಿಸಿದರು.

(ಫೋಟೋ ಕ್ಯಾಪ್ಞನ್‌)

ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯ ಹುಳ್ಳೆನಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸದಸ್ಯರು, ಕಾಂಗ್ರೆಸ್‌ ಮುಖಂಡರು ಅಭಿನಂದಿಸಿದರು.