ಸಾರಾಂಶ
ಸಾಗರ ಗಡಿಭಾಗದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಗುರುವಾರ ನಗರದಲ್ಲಿ ಪರಿಸರಪ್ರೇಮಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ: ಸಾಗರ ಗಡಿಭಾಗದ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹೋರಾಟಗಾರರಿಗೆ ಬೆಂಬಲ ಸೂಚಿಸಿ ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧ ಗುರುವಾರ ನಗರದಲ್ಲಿ ಪರಿಸರಪ್ರೇಮಿಗಳು ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ ಸಿ. ತೀರ್ಥೇಶ್ ನೇತೃತ್ವದಲ್ಲಿ ಸಂಜೆ ಮಾಧವಚಾರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಯೋಜನೆಗೆ ವಿರೋಧ ವ್ಯಕ್ತಪಡಿಸಲಾಯಿತು. ಹೋರಾಟದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಹೋರಾಟ ನಡೆಸಲಾಗುತ್ತಿದೆ ಎಂದರು.ಈ ಯೋಜನೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡಿರುವುದು ಸರಿಯಲ್ಲ. ಅಲ್ಲದೆ ಯೋಜನೆಯಿಂದ ಯಾವುದೇ ರೀತಿ ಲಾಭವಿಲ್ಲ. ನಷ್ಟದ ಜೊತೆಗೆ ಪರಿಸರ ನಾಶವಾಗಲಿದೆ ತಕ್ಷಣ ಜಿಲ್ಲಾಧಿಕಾರಿಗಳು ಈ ಸಂಬಂಧ ಗಮನ ಹರಿಸಿ ಯೋಜನೆ ಸ್ಥಗಿತಗೊಳಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಮನವಿಯಲ್ಲಿ ಕೋರಲಾಯಿತು.
ತಹಸೀಲ್ದಾರ್ ಮಂಜಾನಾಯ್ಕ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪರಿಸರಪ್ರೇಮಿಗಳು ಹೋರಾಟದಲ್ಲಿ ಪಾಲ್ಗೊಂಡಿದ್ದರು.