ಇಂದು ಕಡೂರಿನಲ್ಲಿ ಪುರಸಭೆಯಿಂದ ಮಾನವ ಸರಪಳಿ ಕಾರ್ಯಕ್ರಮ

| Published : Sep 15 2024, 01:52 AM IST

ಇಂದು ಕಡೂರಿನಲ್ಲಿ ಪುರಸಭೆಯಿಂದ ಮಾನವ ಸರಪಳಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಇಂದು (ಸೆ.15ರಂದು) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಡೂರು ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಆಚರಣೆಗೆ ಪುರಸಭೆಯಿಂದ ಸಕಲ ಸಿದ್ಧತೆ ನಡೆದಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್

ಕನ್ನಡಪ್ರಭ ವಾರ್ತೆ, ಕಡೂರು

ಇಂದು (ಸೆ.15ರಂದು) ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಕಡೂರು ಪಟ್ಟಣದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಆಚರಣೆಗೆ ಪುರಸಭೆಯಿಂದ ಸಕಲ ಸಿದ್ಧತೆ ನಡೆದಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ಈ ಕುರಿತು ಪುರಸಭೆ ಕನಕ ಸಭಾಂಗಣದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಾಲೂಕು ಆಡಳಿತದ ನಿರ್ದೇಶನದಂತೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮಾನವ ಸರಪಳಿ ವಿಶೇಷ ಕಾರ್ಯಕ್ರಮ ಯಶಸ್ವಿಗೊಳಿಸಲು ಈಗಾಗಲೇ ಪುರಸಭೆ ಹಲವು ಪೂರ್ವ ಸಿದ್ಧತೆ ಮಾಡಲಾಗಿದೆ. ಇದಕ್ಕೆ ಪಟ್ಟಣದ ವ್ಯಾಪ್ತಿಯ ಎಲ್ಲ ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ನಾಗರಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವ ಮೂಲಕ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈಗಾಗಲೇ ಪಟ್ಟಣವನ್ನು ತಳಿರುತೋರಣಗಳಿಂದ ಸಿಂಗಾರಗೊಳಿಸುವ ಕಾರ್ಯ ನಡೆದಿದೆ. ಬಹುಮುಖ್ಯವಾಗಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂವಿಧಾನಕ್ಕೆ ಗೌರವ ಸೂಚಿಸುವ ಉದ್ದೇಶದಿಂದ ಪ್ರತಿಯೊಬ್ಬರೂ ಒಗ್ಗಟ್ಟಿನೊಂದಿಗೆ ಜಾಗೃತಿ ಮೂಡಿಸಬೇಕಿದೆ. ಕ್ಷೇತ್ರದ ಶಾಸಕರು, ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ಭಾಗವಹಿಸಲಿದ್ದು, ಪುರಸಭಾ ವ್ಯಾಪ್ತಿ ಪಟ್ಟಣದಲ್ಲಿ 4.5 ಕಿ.ಮೀ. ನಷ್ಟು ಮಾನವ ಸರಪಳಿ ನಿರ್ಮಿಸಲಾಗುವುದು. ಬಳಿಕ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಪ್ರತಿಜ್ಞೆ ಭೋಧಿಸಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಗುವುದು ಎಂದರು.ಪುರಸಭಾ ಮುಖ್ಯಾಧಿಕಾರಿ ಕೆ.ಎಸ್. ಮಂಜುನಾಥ್ ಮಾತನಾಡಿ, ಈಗಾಗಲೇ ಪಟ್ಟಣದ ವ್ಯಾಪ್ತಿಯ 23 ಸಂಘಟನೆಗಳು ಹಾಗೂ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಾಹಿತಿ ನೀಡಲಾಗಿದೆ. ಬೆಳಿಗ್ಗೆ 9-00 ರಿಂದ 10ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಟ್ಟಣದ ಕೆಂಪೇಗೌಡ ವೃತ್ತದಿಂದ ಕೆಎಸ್‍ಆರ್ ಟಿಸಿ ಬಸ್‍ನಿಲ್ದಾಣದ ಮಾರ್ಗವಾಗಿ ಮಾನವ ಸರಪಳಿ ನಿರ್ಮಿಸಲಾಗುವುದು ಯು.ಬಿ.ರಸ್ತೆ ಸೇರಿದಂತೆ ಬಸವೇಶ್ವರ ವೃತ್ತ, ಕೆಎಲ್‍ವಿ ವೃತ್ತ ಹಾಗೂ ಶ್ರೀ ಚಂದ್ರಮೌಳೇಶ್ವರ ದೇವಾಲಯದವರೆಗಿನ ಮಾನವ ಸರಪಳಿ ನಿರ್ಮಿಸಲಾಗುವುದು. ಜೊತೆಯಲ್ಲಿ ವಿಶೇಷ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸುವ ಕಾರ್ಯ ಮಾಡಲಾಗುವುದು ಎಂದರು.ಡಿಎಸ್‍ಎಸ್ ಸಂಘಟನೆ ಮುಖಂಡರಾದ ಕೃಷ್ಣಪ್ಪ, ಟಿ.ಮಂಜಪ್ಪ, ಟಿ.ಲಕ್ಷ್ಮಣ್, ಶ್ರೀಕಾಂತ್, ಕೃಷ್ಣಮೂರ್ತಿ, ರೋಟರಿ ಕ್ಲಬ್ ಅಧ್ಯಕ್ಷ ಟಿ.ಡಿ. ರಾಜನ್, ಜೆಸಿಐ ಘಟಕದ ಅಧ್ಯಕ್ಷ ಗೋಪಿ, ಪರಿಸರ ಅಭಿಯಂತರ ಶ್ರೇಯಸ್‍ಕುಮಾರ್, ಆರೋಗ್ಯ ನಿರೀಕ್ಷಕ ಶ್ರೀನಿವಾಸ್ ಮೂರ್ತಿ ಮತ್ತಿತರಿದ್ದರು. 14ಕೆಡಿಯು1

ಕಡೂರು ಪಟ್ಟಣದ ಪುರಸಭಾ ಸಭಾಂಗಣದಲ್ಲಿ ನಡೆದ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಪುರಸಭಾಧ್ಯಕ್ಷ ಭಂಡಾರಿಶ್ರೀನಿವಾಸ್ ಸಭೆಯಲ್ಲಿ ಮಾತನಾಡಿದರು.