ಸಾರಾಂಶ
ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ರಾಷ್ಟ್ರದ ಸಂಪನ್ಮೂಲಗಳಲ್ಲಿ ಮಾನವ ಸಂಪನ್ಮೂಲ ಅತ್ಯಂತ ಮಹತ್ವದ್ದಾಗಿದೆ. ನಾವು ನಮ್ಮ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಬೇಕು ಎಂದು ಸುರತ್ಕಲ್ ಗೋವಿಂದದಾಸ ಪದವಿ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಹರೀಶ್ ಆಚಾರ್ಯ ಹೇಳಿದರು.ಸುರತ್ಕಲ್ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗೋವಿಂದದಾಸ ಪದವಿ ಕಾಲೇಜಿನ ಪ್ರಾಂಶುಪಾಲ ಲಕ್ಷ್ಮೀ ಪಿ. ವಹಿಸಿದ್ದರು. ಉಪ ಪ್ರಾಂಶುಪಾಲರಾದ ಸುನೀತಾ ಕೆ., ಮಾನವಿಕ ಸಂಘದ ಸಂಯೋಜಕಿ ಲೀಲಾವತಿ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಖುಷಿ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಸ್ನೇಹಶ್ರೀ ವಾಸ್ತವ ಸ್ವಾಗತಿದರು. ಸಂಘದ ಕಾರ್ಯದರ್ಶಿ ಅಮರೇಶ್ವರಿ ವಂದಿಸಿದರು.;Resize=(128,128))
;Resize=(128,128))
;Resize=(128,128))