ಸಾರಾಂಶ
ಮಾನವ ಸಂಪನ್ಮೂಲ ಬಳಕೆ ಅಗತ್ಯ: ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆ
ಕನ್ನಡ ಪ್ರಭ ವಾರ್ತೆ ಗುಬ್ಬಿ
ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ನಮ್ಮ ದೇಶದಲ್ಲಿ ಮಾನವ ಸಂಪನ್ಮೂಲವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕಿದೆ ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು. ಗುರುವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ 78 ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯನಂತರದಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ವಿಶ್ವದಲ್ಲಿಯೇ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಇದ್ದು ದೇಶದ ಸರ್ವತೋಮುಖ ಅಭಿವೃದ್ಧಿಗೆ ಬದ್ಧರಾಗಿರೋಣ ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರತಿ, ತಾಲೂಕು ಪಂಚಾಯಿತಿ ಇ ಒ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಲೇಪಾಕ್ಷಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುಳಾದೇವಿ, ಉಪನ್ಯಾಸಕ ಲೋಕೇಶ್ ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದ್ದರು.