ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ

| Published : Dec 13 2024, 12:49 AM IST

ಸಾರಾಂಶ

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರರು ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು.ಈ ಸಂದರ್ಭ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಸುರೇಖಾ ಕೆ. ಮಾತನಾಡಿ, ಪ್ರತಿಯೊಬ್ಬರು ಮತ್ತೊಬ್ಬರ ಹಕ್ಕುಗಳನ್ನು ಗೌರವಿಸಬೇಕು ಹಾಗೂ ಯಾರ ಹಕ್ಕುಗಳಿಗೆ ಕುಂದುಂಟು ಮಾಡದೇ ವ್ಯಕ್ತಿ ಗೌರವ ಕಾಪಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅಲ್ಲದೇ ಮಾನವ ಹಕ್ಕುಗಳು ಮನುಷ್ಯನ ಹುಟ್ಟಿನಿಂದಲೇ ಬಂದಂತಹ ಹಕ್ಕುಗಳಾಗಿದ್ದು, ಎಲ್ಲರೂ ಅದರ ಅವಶ್ಯಕತೆ ಮತ್ತು ಮಹತ್ವವನ್ನು ಅರಿಯುವುದು ಮುಖ್ಯವಾಗಿದೆ ಎಂದರು.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಸಿ.ಬಿ. ನವೀನ್ ಚಂದ್ರ ಅವರು ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಪ್ರೀತಿ ಹರೀಶ್ ರಾಜ್, ಪ್ರೊ. ಚೈತ್ರಾ ಕುಮಾರಿ ಮತ್ತು ಪ್ರೊ. ಆನ್ಸಿ ಪ್ಲೋರಾ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿ ಕಾರ್ಯದರ್ಶಿಗಳಾದ ಅಶೋಕ ಮತ್ತು ನಂದನ್ ರೈಮಂಡ್ ಮಚಾಡೊ, ವಿದ್ಯಾರ್ಥಿ ಮಂಡಳಿಯ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು ಮತ್ತು ವಿದ್ಯಾರ್ಥಿಗಳೆಲ್ಲರು ಮಾನವ ಹಕ್ಕುಗಳ ಪರ ಘೋಷಣೆಗಳನ್ನು ಕೂಗಿದರು.