ಮಾನವ ಸಾಗಣೆ ಸಮಾಜಕ್ಕೆ ಮಾರಕ: ರೇಣುಕಾ

| Published : Aug 02 2025, 12:00 AM IST

ಸಾರಾಂಶ

ರಾಮನಗರ: ಮಾನವ ಕಳ್ಳ ಸಾಗಾಣಿಕೆ ಎಂಬುದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಪಿಡುಗಾಗಿದೆ. ಅದನ್ನು ಹೋಗಲಾಡಿಸುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ ಬಿ.ವಿ.ರೇಣುಕಾ ಹೇಳಿದರು.

ರಾಮನಗರ: ಮಾನವ ಕಳ್ಳ ಸಾಗಾಣಿಕೆ ಎಂಬುದು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಪಿಡುಗಾಗಿದೆ. ಅದನ್ನು ಹೋಗಲಾಡಿಸುವುದು ನಾಗರಿಕ ಸಮಾಜದ ಜವಾಬ್ದಾರಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ ಬಿ.ವಿ.ರೇಣುಕಾ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಜಿಲ್ಲಾ ವಕೀಲರ ಸಂಘ, ಮುಕ್ತಿ ಒಕ್ಕೂಟ ಕರ್ನಾಟಕ, ಶಾಂತ ಜೀವಜ್ಯೋತಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾದ್ಯಂತ ಇಂದು ಮಾನವ ಕಳ್ಳ ಸಾಗಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಪಿಡುಗನ್ನು ನಾಶ ಮಾಡಬೇಕಾದದ್ದು ನಾಗರಿಕರ ಕರ್ತವ್ಯವಾಗಿದೆ. ಮಾವನ ಕಳ್ಳ ಸಾಗಣೆ ಎಂಬುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗುತ್ತಿದೆ. ಇದು ಜಾಗತಿಕವಾಗಿ ಸಮಾಜವನ್ನು ಪೀಡಿಸಿರುವ ಸಂಕೀರ್ಣ ಸಮಸ್ಯೆಯಾಗಿದೆ ಎಂದು ಹೇಳಿದರು.

ಮಾನವ ಕಳ್ಳ ಸಾಗಣೆ ಕುರಿತು ಉಪನ್ಯಾಸ ನೀಡಿದ ವಕೀಲ ಕ್ರಿಸ್ಟೋಫರ್, ಲೈಂಗಿಕ ಶೋಷಣೆಗಾಗಿ ಕಳ್ಳ ಸಾಗಣೆ, ಮಕ್ಕಳ ಒತ್ತಾಯ ಪೂರ್ವಕ ಭಿಕ್ಷಾಟನೆಗಾಗಿ ಕಳ್ಳಸಾಗಣೆ, ಜೀತಕ್ಕಾಗಿ ಕಳ್ಳಸಾಗಣೆ, ಬಾಲಕಾರ್ಮಿಕತೆಗಾಗಿ ಕಳ್ಳಸಾಗಣೆ, ಅಂಗಾಂಗ ಕಸಿಗಾಗಿ ಕಳ್ಳಸಾಗಣೆ ಮತ್ತು ಬಾಲ್ಯವಿವಾಹಕ್ಕಾಗಿ ಕಳ್ಳಸಾಗಣೆ ಜೀವಂತವಾಗಿದ್ದು ಇದಕ್ಕೆ ಮೂಲಕಾರಣ ಬಡತನ, ಆರ್ಥಿಕ ಸಮಸ್ಯೆ, ನಿರುದ್ಯೋಗ, ಶಿಕ್ಷಣದ ಕೊರತೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಸವಿತಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಅನ್ಮೋಲ್ ಜೈನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಜಿಲ್ಲಾ ಕಾರ್ಮಿಕಾಧಿಕಾರಿ ನಾಗೇಂದ್ರ ಮತ್ತಿತರರು ಉಪಸ್ಥಿತರಿದ್ದರು.

31ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮಾನವ ಕಳ್ಳ ಸಾಗಣೆ ತಡೆ ದಿನಾಚರಣೆ-2025 ಕಾರ್ಯಕ್ರಮವನ್ನು ನ್ಯಾ.ರೇಣುಕಾ ಉದ್ಘಾಟಿಸಿದರು.