ರಾಮಾಯಣದಲ್ಲಿ ಮಾನವೀಯ ಮೌಲ್ಯ

| Published : Oct 18 2024, 12:01 AM IST

ಸಾರಾಂಶ

ಕುಂದಗೋಳ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಈಗಾಗಲೇ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್‌ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಜಾಗ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು.

ಕುಂದಗೋಳ:

ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣದಲ್ಲಿ ಮಾನವೀಯ ಮೌಲ್ಯಗಳಿದ್ದು ಅವುಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್‌ ರಾಜು ಮಾವರಕರ ಹೇಳಿದರು.

ಗುರುವಾರ ಪಟ್ಟಣದ ಸವಾಯಿ ಗಂಧರ್ವ ಸಭಾಭವನದಲ್ಲಿ ತಾಲೂಕು ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಡೆದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಎಸ್ಟಿ ಸಮುದಾಯದ ಮುಖಂಡರು ಮನವಿ ಸಲ್ಲಿಸಿದ್ದು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಅವರು, ಎಸ್ಟಿ ಸಮುದಾಯಕ್ಕೆ ಜಾರಿಯಾದ ಪ್ರತಿಯೊಂದು ಯೋಜನಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ತಾಲೂಕು ಎಸ್‌ಟಿ ಸಮುದಾಯದ ಅಧ್ಯಕ್ಷ ರಾಜು ದೊಡ್ಡಶಂಕರ ಮಾತನಾಡಿ, ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಈಗಾಗಲೇ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್‌ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಜಾಗ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ತಾಪಂ ಇಒ ಜಗದೀಶ ಕಮ್ಮಾರ, ಸಂಶಿ ಗ್ರಾಪಂ ಅಧ್ಯಕ್ಷ ರಾಜು ಪುಟ್ಟಣ್ಣನವರ ಮಾತನಾಡಿದರು. ಇದಕ್ಕೂ ಮುನ್ನ ರಂಗನಾಥ ವಾಲ್ಮೀಕಿ ಉಪನ್ಯಾಸ ನೀಡಿದರು.

ಈ ವೇಳೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕಿ ಮೀನಾಕ್ಷಿ ಗುದಗಿ ಸ್ವಾಗತಿಸಿದರು. ಇದಕ್ಕೂ ಮುನ್ನ ಪಟ್ಟಣದ ತಹಸೀಲ್ದಾರ್‌ ಕಚೇರಿಯಿಂದ ಸವಾಯಿ ಗಂಧರ್ವ ಸ್ಮಾರಕ ಭವನದ ವರೆಗೆ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಮಾಡಲಾಯಿತು.

ಈ ವೇಳೆ ಸಿಪಿಐ ಜಗದೀಶ ಅಂಬೀಗೇರ, ಸುಧಾಕರ ಬಾಗೇವಾಡಿ, ಭಾರತಿ ಮೆಣಸಿನಕಾಯಿ, ಸಿ.ವಿ. ಕುಲಕರ್ಣಿ, ಭಾರತಿ ಮೆಣಸಿನಕಾಯಿ, ಎಫ್‌.ಎಫ್‌. ರಶ್ಮಿ, ಮಾದೇವಿ ಮಾಡಲಗೇರಿ, ಈರಣ್ಣ ಗೌಡನಾಯಕರ. ಅರ್ಜುನ್ ತಳವಾರ, ಬಸವರಾಜ ತಳವಾರ, ರವಿ ದೊಡ್ಡಮನಿ, ಮಂಜುನಾಥ ಬಾರಕೇರ, ಬಸವರಾಜ ದೊಡ್ಡಮನಿ, ಅಡಿವೆಪ್ಪ ಹೇಬಸೂರು, ಅಶೋಕ ಕುದರಿ, ಪ್ರವೀಣ ಕಟ್ಟಿಮನಿ, ಬಸವರಾಜ ನಾಯ್ಕರ, ಸಿದ್ದಲಿಂಗಪ್ಪ ಕರೆಮ್ಮನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.