ಸರ್ವಜ್ಞನ ತ್ರಿಪದಿಗಳಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ: ಭರತ್‌ ಶೆಟ್ಟಿ

| Published : Feb 21 2025, 12:50 AM IST

ಸರ್ವಜ್ಞನ ತ್ರಿಪದಿಗಳಲ್ಲಿ ಮಾನವೀಯ ಮೌಲ್ಯ, ವೈಚಾರಿಕತೆ: ಭರತ್‌ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಕುಂಬಾರರ ಮಹಾ ಸಂಘದ ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ ಕುಂಬಾರರ ಯುವ ವೇದಿಕೆ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಗುರುವಾರ ಬೋಂದೆಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ನಡೆಯಿತು.

ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಕುಂಬಾರರ ಮಹಾ ಸಂಘದ ಕರಾವಳಿ ವಿಭಾಗ ಮತ್ತು ಕರಾವಳಿ ಕುಲಾಲರ/ ಕುಂಬಾರರ ಯುವ ವೇದಿಕೆ ಸಹಕಾರದೊಂದಿಗೆ ಸಂತ ಕವಿ ಸರ್ವಜ್ಞ ಜಯಂತಿ ಗುರುವಾರ ಬೋಂದೆಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಮಂಗಳೂರು ಉತ್ತರ ಶಾಸಕ ಡಾ.ವೈ. ಭರತ್ ಶೆಟ್ಟಿ ಮಾತನಾಡಿ, 16ನೇ ಶತಮಾನದಲ್ಲಿ ಕುಲಾಲ ಸಮುದಾಯದಲ್ಲಿ ಹುಟ್ಟಿದ ಸಂತ ಕವಿ ಸರ್ವಜ್ಞ ಅವರು ಜೀವನವನ್ನು ಯಾವ ದೃಷ್ಟಿಕೋನದಿಂದ ನೋಡುತ್ತಿದ್ದರು ಎಂಬುದನ್ನು ಅವರ ತ್ರಿಪದಿಗಳನ್ನು ಓದಿದಾಗ ತಿಳಿಯುತ್ತದೆ. ಸರ್ವಜ್ಞ ತಮ್ಮ ತ್ರಿಪದಿಯಲ್ಲಿ ಜಗತ್ತಿನ ಜ್ಞಾನ, ವೈಚಾರಿಕತೆ, ಮಾನವೀಯ ಮೌಲ್ಯಗಳನ್ನು ತಿಳಿಸಿಕೊಟ್ಟಿದ್ದಾರೆ. ಇಂತಹ ಮಾನವೀಯ ಮೌಲ್ಯಗಳುಳ್ಳ ತ್ರಿಪದಿಗಳನ್ನು ವಿದ್ಯಾರ್ಥಿಗಳು ಓದಬೇಕು ಎಂದು ಕರೆ ನೀಡಿದರು.

ಮೇಯರ್ ಮನೋಜ್ ಕುಮಾರ್ ಮಾತನಾಡಿ, ಸರ್ವ ಜ್ಞಾನವನ್ನು ಹೊಂದಿದ ತ್ರಿಪದಿ ಕವಿ ಸರ್ವಜ್ಞ ಜನರ ಜೀವನಕ್ಕೆ, ಸಮಾಜಕ್ಕೆ ಉತ್ತಮ ಸಂದೇಶವನ್ನು ತಮ್ಮ ವಚನಗಳ ಮೂಲಕ ನೀಡಿದ್ದಾರೆ ಎಂದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿದರು. ಮಂಗಳೂರು ವಿವಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಡಾ. ಯತೀಶ್ ಕುಮಾರ್ ಉಪನ್ಯಾಸ ನೀಡಿದರು.

ಬೋಂದೆಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲ ಗುಣವಂತ ವಿ. ಗುನಗಿ, ರಾಜ್ಯ ಕುಂಬಾರರ ಮಹಾ ಸಂಘದ ಕಾರ್ಯಾಧ್ಯಕ್ಷ ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಕರಾವಳಿ ಕುಲಾಲ/ ಕುಂಬಾರ ಯುವ ವೇದಿಕೆ ಅಧ್ಯಕ್ಷ ಗಂಗಾಧರ ಬಂಜನ್, ಗಣೇಶ್ ಕುಲಾಲ್ ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ಎಚ್.ಕೆ. ನಯನಾಡು ನಿರೂಪಿಸಿದರು.