ಬಸಂತ್ ಅವರು ಆರು ಬಾರಿ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ

ಕನ್ನಡಪ್ರಭ ವಾರ್ತೆ ಕೆ.ಆರ್. ನಗರ

ಪಟ್ಟಣದ ಹೆಸರಾಂತ ನವನಗರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ 2026-31ನೇ ಸಾಲಿಗೆ ಹಾಗೂ ನಾಲ್ಕನೇ ಬಾರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ಸಚಿವ ದಿವಂಗತ ಎಸ್. ನಂಜಪ್ಪ ಅವರ ಪುತ್ರ ಕೆ.ಎನ್. ಬಸಂತ್ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಅಭಿಮಾನಿಗಳು, ಹಿತೈಷಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ಅರ್ಕನಾಥ ರಸ್ತೆಯಲ್ಲಿರುವ ಬ್ಯಾಂಕಿನ ಪ್ರಧಾನ ಕಚೇರಿ ಮುಂದೆ ನೂರಾರು ಅಭಿಮಾನಿಗಳು, ಹಿತೈಷಿಗಳು ಜಮಾಯಿಸಿದ್ದರು. ಬೆಳಗ್ಗೆಯಿಂದಲೇ ಕಾಯ್ದು ನೆಚ್ಚಿನ ಅಧ್ಯಕ್ಷ ಕೆ.ಎನ್. ಬಸಂತ್ ಅವಿರೋಧ ಆಯ್ಕೆಯಾಗುತ್ತಿದ್ದಂತೆ ಜೈಕಾರದ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ.ಎನ್. ಬಸಂತ್ ಅವರು ಆರು ಬಾರಿ ಆಡಳಿತ ಮಂಡಳಿಯ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೂರು ಬಾರಿ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾಗಿ ಗ್ರಾಹಕರಿಗೆ ಉತ್ತಮ ಆಡಳಿತ ವ್ಯವಸ್ಥೆ ನೀಡಿದ್ದಾರೆ ನಾಲ್ಕುನೇ ಬಾರಿಗೆ ಅಧ್ಯಕ್ಷರಾಗಿರುವುದು ಸಂತಸ ತಂದಿದೆ ಎಂದು ಗ್ರಾಹಕರು ಹಾಗೂ ಪಟ್ಟಣದ ನಾಗರಿಕರು ಶುಭಾಶಯ ಕೋರಿದರು.

ಕೆ.ಆರ್. ನಗರ ಮತ್ತು ಸಾಲಿಗ್ರಾಮ ಆವಳಿ ತಾಲೂಕಿನ ಮುಖಂಡರು, ಹಿತೈಷಿಗಳು, ಅಭಿಮಾನಿ ಬಳಗವೇ ಬ್ಯಾಂಕ್ ಕಚೇರಿಯಲ್ಲಿ ನೂತನ ಅಧ್ಯಕ್ಷ ಕೆ.ಎನ್. ಬಸಂತ್ ಅವರನ್ನು ಅಭಿನಂದಿಸಲಾಯಿತು.

ಮೈಸೂರು ಜಿಲ್ಲಾ ಹಾಪ್ ಕಾಮ್ಸ್ ನೂತನ ನಿರ್ದೇಶಕ ಮಿರ್ಲೆ ಸಂಜಯ್ , ತಾಲೂಕು ಜೆಡಿಎಸ್‌ ವಕ್ತಾರ ಕೆ.ಎಲ್. ರಮೇಶ್, ಹೆಬ್ಬಾಳು ಗ್ರಾಪಂ ಸದಸ್ಯ ಮನುಗೌಡ ಅವರು ನೂತನ ಅಧ್ಯಕ್ಷ ಕೆ.ಎನ್. ಬಸಂತ್ ಹಾಗೂ ಮಹಿಳಾ ನಿರ್ದೇಶಕಿ ಡಾ.ಎಂ.ಪಿ. ಸುಮತಿ ಅವರನ್ನು ಅಭಿನಂದಿಸಿದರು.ೇ