ಹೆಜ್ಜೇನು ದಾಳಿ- ವ್ಯಕ್ತಿ ಸಾವು

| Published : Nov 21 2023, 12:45 AM IST

ಸಾರಾಂಶ

ತುಮಕೂರು:ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಬ್ಬಿ ತಾಲೂಕು ಲಕ್ಕೇನಹಳ್ಳಿ ಗೇಟ್ ಬಳಿ ನಡೆದಿದೆ.

ತುಮಕೂರು:ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುಬ್ಬಿ ತಾಲೂಕು ಲಕ್ಕೇನಹಳ್ಳಿ ಗೇಟ್ ಬಳಿ ನಡೆದಿದೆ.

ಗ್ರಾಮದ ರಂಗನಾಥ ಸ್ವಾಮಿ ದೇವಾಲಯ ಆವರಣದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿತ್ತು. ಆಗ ದಿಢೀರನೆ ಹೆಜ್ಜೇನು ದಾಳಿ ನಡೆಸಿದ ಕಾರಣ ವೀರಭದ್ರಯ್ಯ(47) ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರಿಗೆ ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.