ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆ

| Published : Jul 13 2024, 01:31 AM IST

ಸಾರಾಂಶ

ಪ್ರತಿನಿತ್ಯ ಕುಡಿದು ಬಂದು ಪತ್ನಿಯೊಡನೆ ಜಗಳವಾಡುತ್ತಿದ್ದ ೫೫ ವರ್ಷದ ವ್ಯಕ್ತಿಯೋರ್ವ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಳೇಬೀಡು ಹೋಬಳಿಯ ನಾರಾಯಣಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಪತ್ನಿ ಗಂಗಮ್ಮ ಮಲಗಿದ್ದ ಸಮಯದಲ್ಲಿ ಕುಡಿದ ಮತ್ತಿನಲ್ಲಿ ಮನೆಯಲ್ಲಿದ್ದ ಕುಡುಗೋಲಿನಿಂದ ತನ್ನ ಕತ್ತನ್ನು ಕುಯ್ದುಕೊಂಡಿದ್ದಾನೆ. ನಂತರ ಪತ್ನಿ ಒಳಗಡೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

ಕನ್ನಡಪ್ರಭ ವಾರ್ತೆ ಬೇಲೂರು

ಪತ್ನಿಯೊಂದಿಗಿನ ಕಲಹದಿಂದ ಬೇಸತ್ತ ಪತಿಯೊಬ್ಬ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಹಳೇಬೀಡು ಹೋಬಳಿಯ ನಾರಾಯಣಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಚೌಡಬೋವಿ (೫೫ ವರ್ಷ) ಮೃತಪಟ್ಟ ವ್ಯಕ್ತಿಯಾಗಿದ್ದು, ಕೂಲಿಕೆಲಸ ಮಾಡುತ್ತಿದ್ದ ಚೌಡಬೋವಿ ಪ್ರತಿನಿತ್ಯ ಕುಡಿದು ಬಂದು ಪತ್ನಿ ಗಂಗಮ್ಮ ಅವರ ಜೊತೆ ಗಲಾಟೆ ಮಾಡುತ್ತಿದ್ದ. ಆದರೆ ಗುರುವಾರ ರಾತ್ರಿ ೮:೩೦ರ ಸಮಯದಲ್ಲಿ ಕುಡಿದು ಜಗಳ ಮಾಡಿ ವಿಕೋಪಕ್ಕೆ ತಿರುಗಿದೆ. ರಾತ್ರಿ ಪತ್ನಿ ಗಂಗಮ್ಮ ಮಲಗಿದ್ದ ಸಮಯದಲ್ಲಿ ಕುಡಿದ ಮತ್ತಿನಲ್ಲಿ ಮನೆಯಲ್ಲಿದ್ದ ಕುಡುಗೋಲಿನಿಂದ ತನ್ನ ಕತ್ತನ್ನು ಕುಯ್ದುಕೊಂಡಿದ್ದಾನೆ. ನಂತರ ಪತ್ನಿ ಒಳಗಡೆ ಬಂದು ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದು ಅವರು ತನ್ನ ಮಕ್ಕಳಿಗೆ ವಿಷಯ ತಿಳಿಸಿದ್ದಾರೆ. ತನ್ನ ಇಬ್ಬರು ಮಕ್ಕಳು ಸಹ ಬೇಲೂರಿನಲ್ಲಿ ವಾಸವಿದ್ದು ಪ್ರತಿನಿತ್ಯ ಇವರು ಕುಡಿದು ಗಲಾಟೆ ಮಾಡುತ್ತಿದ್ದಾರೆಂದು ಪೊಲೀಸರಿಗೆ ತಿಳಿಸಿದ್ದು ಸ್ಥಳಕ್ಕೆ ವೃತ್ತನಿರೀಕ್ಷಕ ಪ್ರವೀಣ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.