ವರದಕ್ಷಿಣೆಗಾಗಿ ಗರ್ಭಿಣಿಯನ್ನೇ ಕೊಂದ ಪತಿ

| Published : Nov 20 2024, 12:33 AM IST

ಸಾರಾಂಶ

ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ತಾರಕಕ್ಕೇರಿ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ. ನಯನ (24) ಪತಿಯಿಂದ ಕೊಲೆಯಾದ ಪತ್ನಿ. ದಂಪತಿಗೆ ಒಂದು ಗಂಡು ಮಗು ಕೂಡ ಇತ್ತು. ನಯನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು.

ಕನ್ನಡಪ್ರಭ ವಾರ್ತೆ ಹಾಸನ

ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿ ಜಗಳ ತಾರಕಕ್ಕೇರಿ ಗಂಭೀರವಾಗಿ ಹಲ್ಲೆ ನಡೆಸಿದ್ದರಿಂದ ಗರ್ಭಿಣಿ ಪತ್ನಿ ಸಾವನ್ನಪ್ಪಿದ ಘಟನೆ ಚನ್ನರಾಯಪಟ್ಟಣ ತಾಲೂಕಿನ ನೊರನಕ್ಕಿ ಗ್ರಾಮದಲ್ಲಿ ನಡೆದಿದೆ.

ನಯನ (24) ಪತಿಯಿಂದ ಕೊಲೆಯಾದ ಪತ್ನಿ. ಪತ್ನಿ ಸಾವನ್ನಪ್ಪುತ್ತಲೇ ಪತಿ ಅಯ್ಯಪ್ಪ (31) ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೂರು ವರ್ಷಗಳ ಹಿಂದೆ ಅಯ್ಯಪ್ಪ ಅವರು ದೊಡ್ಡೇರಿ ಕಾವಲು ಗ್ರಾಮದ ನಯನಳನ್ನು ಮದುವೆಯಾಗಿದ್ದರು. ದಂಪತಿಗೆ ಒಂದು ಗಂಡು ಮಗು ಕೂಡ ಇತ್ತು. ನಯನ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು. ಪದೇ ಪದೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಅಯ್ಯಪ್ಪನ ವಿರುದ್ಧ ನಯನ ಎರಡು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಅಯ್ಯಪ್ಪನನ್ನು ಠಾಣೆಗೆ ಕರೆಸಿದ ಪೊಲೀಸರು ಬುದ್ಧಿ ಹೇಳಿ ಕಳುಹಿಸಿದ್ದರು. ಆದರೂ ಬುದ್ಧಿ ಕಲಿಯದ ಅಯ್ಯಪ್ಪ ತನ್ನ ಕಿರುಕುಳ ಮುಂದುವರೆಸಿದ್ದ ಎನ್ನಲಾಗಿದೆ.