ಪತ್ನಿಯನ್ನೆ ಇರಿದು ಕೊಲೆ ಮಾಡಿದ ಪತಿ

| Published : Oct 14 2025, 01:00 AM IST

ಸಾರಾಂಶ

ಚಿಕ್ಕಮಗಳೂರು: ಕೌಟುಂಬಿಕ ಕಲಹದಲ್ಲಿ ಒಂದು ಜೀವ ಬಲಿ ಪಡೆದ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಗಳೂರು: ಕೌಟುಂಬಿಕ ಕಲಹದಲ್ಲಿ ಒಂದು ಜೀವ ಬಲಿ ಪಡೆದ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ಗಂಡನ ಮನೆ ಬಿಟ್ಟು ತವರು ಸೇರಿದ್ದ ಪತ್ನಿಗೆ ಆಕೆ ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸಾವನ್ನಪ್ಪಿದ ಮಹಿಳೆಯನ್ನು 32 ವರ್ಷದ ನೇತ್ರಾ ಎಂದು ಗುರುತಿಸಲಾಗಿದೆ.

ನೇತ್ರಾ ಅವರು ಐದು ತಿಂಗಳ ಹಿಂದಷ್ಟೇ ಸಕಲೇಶಪುರದ ನಿವಾಸಿ ನವೀನ್ ಎಂಬುವರೊಂದಿಗೆ ವಿವಾಹವಾಗಿದ್ದರು. ಆದರೆ, ವಿವಾಹವಾದ ಕೆಲವೇ ದಿನಗಳಲ್ಲಿ ದಂಪತಿಗಳ ನಡುವೆ ಕೌಟುಂಬಿಕ ಕಲಹ ಶುರುವಾಗಿತ್ತು. ಕಲಹ ತೀವ್ರ ಸ್ವರೂಪ ಪಡೆದ ಕಾರಣ, ನೇತ್ರಾ ಸುಮಾರು ಮೂರು ತಿಂಗಳ ಹಿಂದೆ ಪತಿ ಮನೆಯನ್ನು ಬಿಟ್ಟು, ಹೊಸಳ್ಳಿ ಗ್ರಾಮದಲ್ಲಿರುವ ತಮ್ಮ ತವರು ಮನೆಗೆ ಮರಳಿದ್ದರು.

ಪತ್ನಿ ತವರು ಸೇರಿದ್ದರಿಂದ ಕೋಪಗೊಂಡಿದ್ದ ಪತಿ ನವೀನ್, ಹೇಗಾದರೂ ಮಾಡಿ ಅವಳನ್ನು ಹಿಂತಿರುಗಿ ಕರೆತುವ ಅಥವಾ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಭಾನುವಾರ ರಾತ್ರಿ ಹೊಸಳ್ಳಿ ಗ್ರಾಮದಲ್ಲಿರುವ ನೇತ್ರಾಳ ಮನೆಗೆ ಬಂದಿದ್ದಾನೆ.

ರಾತ್ರಿ ಊಟ ಮುಗಿಸಿ ಮನೆಯ ಹೊರಗೆ ನಿಂತಿದ್ದ ನೇತ್ರಾಳನ್ನು ನವೀನ್ ಏಕಾಏಕಿ ತಡೆದು ಚಾಕುವಿನಿಂದ ಇರಿದು ತಕ್ಷಣವೇ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇತ್ರಾ ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದಿದ್ದಾರೆ.

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಆಲ್ಲೂರು ಪೊಲೀಸ್ ಠಾಣೆಯ ಸಿಬ್ಬಂದಿ, ಹೆಚ್ಚಿನ ಸಮಯ ವ್ಯರ್ಥ ಮಾಡದೆ ತಮ್ಮದೇ ವಾಹನದಲ್ಲಿ ನೇತ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನೇತ್ರಾ ದಾರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.