ಸಾರಾಂಶ
ನಾನು ಕಳೆದ ಎರಡು ದಶಕಕ್ಕೂ ಹೆಚ್ಚು ವರ್ಷ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ, ಯುವ ಪ್ರತಿನಿಧಿಯಾಗಿ, ಈಗ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನನ್ನ ತಂದೆ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ
ಯಾದಗಿರಿ : ನಾನು ಕಳೆದ ಎರಡು ದಶಕಕ್ಕೂ ಹೆಚ್ಚು ವರ್ಷ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ, ಯುವ ಪ್ರತಿನಿಧಿಯಾಗಿ, ಈಗ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನನ್ನ ತಂದೆ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ನಾನು ಸಹ ಮಂತ್ರಿಯಾಗುವ ಕನಸು ಕಂಡವನು, ಆದರೆ ನನಗೀಗ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ನೀಡಿ ಜವಬ್ದಾರಿ ನೀಡಿದ್ದಾರೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯ್‌ಸಿಂಗ್ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಆರೋಗ್ಯ ಆವಿಷ್ಕಾರ ಕಾಮಗಾರಿ ಅಡಿಗಲ್ಲು ಸಮಾರಂಭ ತಯಾರಿ ವೀಕ್ಷಣೆ ಮಾಡಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಟ್ಟ ಮಾತಿನಂತೆ ಈಗಾಗಲೇ ಮಂಡಳಿಗೆ 3500 ಕೋಟಿ ರೂ. ಅನುದಾನ ಬಂದಿದೆ. ಪ್ರಜಾಸೌಧ, ಅಕ್ಷರ ಅವಿಷ್ಕಾರ, ಆರೋಗ್ಯ ಆವಿಷ್ಕಾರ ಸೇರಿದಂತೆ ವಿವಿಧ ಹೊಸ ಆಲೋಚನೆಯ ಕೆಲಸಗಳು ಕೈಗೊಳ್ಳಲಾಗುತ್ತಿದೆ ಎಂದರು.
ನಾನು ಸಚಿವ ಸ್ಥಾನದ ಆಕಾಂಕ್ಷಿಯೇಯಾಗಿದ್ದೇನೆ. ಮಂತ್ರಿ ಸ್ಥಾನ ಬಗ್ಗೆ ನನಗೂ ಸಾಕಷ್ಟು ಕನಸಿತ್ತು, ನಾನು ಮೂರು ಸಲ ಶಾಸಕನಾಗಿದ್ದು, ಕಟ್ಟಾ ಕಾಂಗ್ರೆಸ್ ಪಕ್ಷದವನಾಗಿದ್ದೇನೆ, ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ ನನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ, ಪಕ್ಷದ ಆದೇಶ ಪಾಲಿಸಬೇಕಾಗುತ್ತದೆ. ನನಗೂ ಒಂದು ಅವಕಾಶ ಬಂದೇ ಬರುತ್ತದೆ ಎಂಬ ವಿಶ್ವಾಸವಿದೆ ಎಂದು ಡಾ.ಅಜಯಸಿಂಗ್ ಹೇಳಿದರು.
;Resize=(128,128))
;Resize=(128,128))
;Resize=(128,128))