ಚಿಕ್ಕಮಗಳೂರುಸಹಕಾರ ಕ್ಷೇತ್ರದಲ್ಲಿ ಕೈಗೊಂಡ ಹಲವಾರು ಜನಪರ ಕಾರ್ಯಗಳು ಜ.೧೭ ರಂದು ನಡೆಯಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಶ್ರೀರಕ್ಷೆಯಾಗಿ ಗೆಲುವು ನಿಶ್ಚಿತ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಎಸ್. ನಿರಂಜನ್ ವಿಶ್ವಾಸ ವ್ಯಕ್ತಪಡಿಸಿದರು.
- ಸಿ.ಟಿ ರವಿ ಹಾಗೂ ನನಗೆ ಮತ ಕೇಳುತ್ತೇವೆ । ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಹಕಾರ ಕ್ಷೇತ್ರದಲ್ಲಿ ಕೈಗೊಂಡ ಹಲವಾರು ಜನಪರ ಕಾರ್ಯಗಳು ಜ.೧೭ ರಂದು ನಡೆಯಲಿರುವ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಶ್ರೀರಕ್ಷೆಯಾಗಿ ಗೆಲುವು ನಿಶ್ಚಿತ. ನಾನು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಎಸ್. ನಿರಂಜನ್ ವಿಶ್ವಾಸ ವ್ಯಕ್ತಪಡಿಸಿದರು.
ಈ ಚುನಾವಣೆಯಲ್ಲಿ ಚಿಕ್ಕಮಗಳೂರು ಕೃಷಿ ಪತ್ತಿನ ಸಹಕಾರ ಕ್ಷೇತ್ರದಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿದ್ದು, ಹಿಂದಿನ ಆಡಳಿತ ಮಂಡಳಿಯಲ್ಲಿಯೂ ನಿರ್ದೇಶಕರಾಗಿ ಸೇವೆ ಸಲ್ಲಿಸಿ ತಾಲೂಕು ವ್ಯಾಪ್ತಿಗೆ ಬರುವ ಎಲ್ಲಾ ಕೃಷಿಪತ್ತಿನ ಸಹಕಾರ ಸಂಘಗಳಿಗೆ ಡಿಸಿಸಿ ಬ್ಯಾಂಕಿನಿಂದ ಬರುವ ಸಾಲಸೌಲಭ್ಯಗಳನ್ನು ತಾರತಮ್ಯವಿಲ್ಲದೆ ತಲುಪಿಸಿದ್ದೇನೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಕೆಲವು ಸಹಕಾರ ಸಂಘಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಂದರ್ಭದಲ್ಲಿ ಅಂತಹ ಸಂಘಗಳಿಗೆ ಆರ್ಥಿಕ ಪುನಶ್ಚೇತನ ನೀಡುವ ಮೂಲಕ ಸಹಕಾರ ಸಂಘಗಳು ಆರ್ಥಿಕ ಚೇತರಿಕೆಯಾಗಿ ರೈತರಿಗೆ ಸಹಕಾರಿಯಾಗಲು ಶಕ್ತಿ ಮೀರಿ ಶ್ರಮಿಸಿದ್ದೇನೆ. ಜೊತೆಗೆ ನಮ್ಮ ಕ್ಷೇತ್ರ ಹೊರತುಪಡಿಸಿ ಅನೇಕ ರೈತರಿಗೆ ಸಾಲ ಸೌಲಭ್ಯ ಒದಗಿಸುವಲ್ಲಿ ಶ್ರಮಿಸಿದ್ದೇನೆಂದು ತಿಳಿಸಿದರು.
ಕೃಷಿ ಪತ್ತಿನ ಸಹಕಾರ ಸಂಘಗಳ ಚುನಾವಣಾ ಸಂದರ್ಭದಲ್ಲಿ ಪ್ರತಿ ಸಹಕಾರ ಸಂಘಗಳಿಗೂ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗುವಂತೆ ಕಾರ್ಯತಂತ್ರ ರೂಪಿಸಿದ್ದಲ್ಲದೆ ಅವರಿಗೆ ಬೇಕಾದ ಸಹಾಯ, ಸಹಕಾರ, ಸಲಹೆ ನೀಡಿರುವುದು ಈ ಚುನಾವಣೆಯಲ್ಲಿ ಸಹಕಾರ ಸಂಘಗಳ ಪ್ರತಿನಿಧಿ ಮತದಾರರು ನನ್ನನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.ಈ ಚುನಾವಣೆ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಬಲಾಢ್ಯರು ಮತ್ತು ಸಾಮಾನ್ಯರ ನಡುವೆ ನಡೆಯುವ ಚುನಾವಣೆ ಯಾಗಿದ್ದು, ನಾನೊಬ್ಬ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಪಕ್ಷಕ್ಕೆ ನಿಷ್ಠೆಯಿಂದ ದುಡಿದಿದ್ದೇನೆ. ಈ ಹಿಂದೆ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಆಯ್ಕೆಯಾಗಿದ್ದು, ಅಧ್ಯಕ್ಷನಾಗುವ ಸಂದರ್ಭದಲ್ಲಿ ಕಡೆಗಣಿಸಲಾಯಿತು ಎಂದು ವಿಷಾಧಿಸಿದರು.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಲು ಬಯಸಿದಾಗ ಕಡೆಗಣಿಸಲಾಯಿತು. ಈಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಪಕ್ಷ ಕಡೆಗಣಿಸಿದಂತೆ ಕಾಣುತ್ತಿದೆ. ಸಣ್ಣ ಪುಟ್ಟ ಅವಕಾಶಗಳನ್ನು ನಿರಾಕರಿಸಿ ಹಲವಾರು ಹುದ್ದೆಗಳಲ್ಲಿ ಇರುವವರಿಗೆ ಅವಕಾಶ ಕಲ್ಪಿಸಿದರೆ ಪಕ್ಷದಲ್ಲಿ ಕೆಳಹಂತದ ಕಾರ್ಯಕರ್ತರು ಯಾರಿಗಾಗಿ ದುಡಿಯಬೇಕು ಎಂದು ಪ್ರಶ್ನಿಸಿದರು.ಭೋಜೇಗೌಡರನ್ನು ಸೋಲಿಸುವುದು ನಮ್ಮ ಗುರಿ:ಕ್ಷೇತ್ರದಲ್ಲಿ 32 ಸಹಕಾರ ಸಂಘಗಳ ಪದಾಧಿಕಾರಿಗಳ ಮತದಾರರಿದ್ದು, ಅವರೆಲ್ಲಾ ತಮ್ಮನ್ನು ಬೆಂಬಲಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿ.ಟಿ ರವಿ ಹಾಗೂ ನನಗೆ ಮತ ಕೇಳುತ್ತೇವೆ. ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರನ್ನು ಸೋಲಿಸುವುದೇ ನಮ್ಮ ಗುರಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಚಿಕ್ಕಮಗಳೂರು ಕ್ಷೇತ್ರದಿಂದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿರುವ ಎಂ.ಎಸ್. ನಿರಂಜನ್ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಆದರೆ, ಬಿಜೆಪಿ ನಾಯಕ ಸಿ.ಟಿ ರವಿಯವರು ಈ ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿಲ್ಲದ ಕಾರಣ ಪಕ್ಷದ ಚುನಾವಣೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಈ ಕಾರಣ ದಿಂದ ಅಧ್ಯಕ್ಷರ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಮತದಾರರು ನನ್ನನ್ನು ಜಯಶಾಲಿಯನ್ನಾಗಿ ಮಾಡುವ ಭರವಸೆ ಇದೆ ಎಂದರು.ಸುದ್ಧಿಗೋಷ್ಠಿಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಘುನಂದನ್, ನಿರ್ದೇಶಕ ರಾಜು, ಸದಸ್ಯ ರಮೇಶ್, ಗಾಳಿಹಳ್ಳಿ ಶಿವು ಉಪಸ್ಥಿತರಿದ್ದರು.15 ಕೆಸಿಕೆಎಂ 4ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ನಿರಂಜನ್ ಮಾತನಾಡಿದರು.