ನಾನು ಕರಸೇವಕ ನನ್ನನ್ನೂ ಬಂಧಿಸಿ: ಸಿ.ಟಿ ರವಿ ಧರಣಿ

| Published : Jan 05 2024, 01:45 AM IST

ನಾನು ಕರಸೇವಕ ನನ್ನನ್ನೂ ಬಂಧಿಸಿ: ಸಿ.ಟಿ ರವಿ ಧರಣಿ
Share this Article
  • FB
  • TW
  • Linkdin
  • Email

ಸಾರಾಂಶ

ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಸಿ.ಟಿ.ರವಿ ನಗರ ಪೊಲೀಸ್‌ ಠಾಣೆ ಎದುರು ಗುರುವಾರ ಬೆಳಗ್ಗೆ ಧರಣಿ ನಡೆಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಮಾಜಿ ಸಚಿವ ಸಿ.ಟಿ ರವಿ ನಗರ ಪೊಲೀಸ್‌ ಠಾಣೆ ಎದುರು ಗುರುವಾರ ಬೆಳಗ್ಗೆ ಧರಣಿ ನಡೆಸಿದರು.

ಹುಬ್ಬಳ್ಳಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ.ಟಿ.ರವಿ ಮೌನ ಪ್ರತಿಭಟನೆ ನಡೆಸುತ್ತಿ ದ್ದಂತೆ ಬಿಜೆಪಿ ಕಾರ್ಯಕರ್ತರು ಹಲವು ಮುಖಂಡರು ಠಾಣೆ ಎದುರು ಜಮಾಯಿಸಿದರು.

ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಪೊಲೀಸ್‌ ಠಾಣೆ ಒಳಗೆ ಸಿ.ಟಿ ರವಿಯವರನ್ನು ಕರೆದುಕೊಂಡು ಹೋದರು. ಈ ವೇಳೆ ಕೆಂಡಾಮಂಡಲರಾದ ಬಿಜೆಪಿ ಕಾರ್ಯಕರ್ತರು ನಾವು ಕರಸೇವಕರೆ ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆಯಿತು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಿ.ಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕೆಲ ಹೊತ್ತು ಪೊಲೀಸ್‌ ಠಾಣೆ ಎದುರು ಹೈ ಡ್ರಾಮ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆ ಆವರಣದಿಂದ ಹೊರಗೆ ಕಳುಹಿಸಿದರು. 4 ಕೆಸಿಕೆಎಂ 3

ನಾನು ಕರಸೇವಕ ನನ್ನನ್ನೂ ಬಂಧಿಸಿ ಎಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಎದುರು ಸಿ.ಟಿ. ರವಿ ಅವರು ಗುರುವಾರ ಧರಣಿ ನಡೆಸಿದರು.