ಸಾರಾಂಶ
ಮಾಗಡಿ: ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಮಾಗಡಿ: ಸಚಿವ ಸಂಪುಟ ವಿಸ್ತರಣೆಯಾದರೆ ನನಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ದಿನ ಹೀಗೆ ಶಾಸಕರಾಗೇ ಇರುವುದು ಹೇಳಿ, ಹಾಗೆಂದು ಸಚಿವ ಸ್ಥಾನಕ್ಕಾಗಿ ನಾನು ಒತ್ತಡ ಹೇರುತ್ತಿಲ್ಲ. ಹಿರಿಯ ಶಾಸಕರು ಪಕ್ಷಕ್ಕಾಗಿ ದುಡಿದಿದ್ದೇವೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ಯಾರ ಶಕ್ತಿ ಏನೆಂಬುದನ್ನು ಹೈಕಮಾಂಡ್ ಪರಿಗಣಿಸಿದೆ. ಈ ಬಾರಿ ನನಗೆ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಬಾಲಕೃಷ್ಣ ಹೇಳಿದರು.ಶಾಸಕ ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುತ್ತಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕರು, ಎಲ್ಲರಿಗೂ ಸಚಿವ ಸ್ಥಾನದ ಮೇಲೆ ಆಸೆ ಇದ್ದೇ ಇರುತ್ತದೆ. ನಮಗೂ ಆಸೆ ಇದೆ, ಅವರಿಗೂ ಆಸೆ ಇದೆ, ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಹೇಳಿದರು.
ಆರು ತಿಂಗಳಲ್ಲಿ ಅಭಿವೃದ್ಧಿ ತೋರಿಸುವೆ: ಸಾಲು ಸಾಲು ಚುನಾವಣೆ ಬಂದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಬಗ್ಗೆ ನನಗೂ ಬೇಸರವಿದೆ. ಅರಣ್ಯ ಇಲಾಖೆ ಮತ್ತು ಕೆರೆ ಅಭಿವೃದ್ಧಿ ನಿಗಮದಿಂದ ಅನುಮೋದನೆ ಸಿಕ್ಕಿದ್ದು ಕಾಮಗಾರಿ ಮುಂದುವರಿಸಲಾಗುತ್ತದೆ. ಜೊತೆಗೆ ಕೋಟೆ ಅಭಿವೃದ್ಧಿಗೆ 100 ಕೋಟಿ ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಂದಿನ ತಿಂಗಳಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರು ಚಾಲನೆ ನೀಡಲಿದ್ದು, ಇನ್ನೂ ಆರು ತಿಂಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಪಥದಲ್ಲಿ ಸಾಗುತ್ತವೆ ಎಂದರು.ಎನ್‌ಡಿಎ ಮುಖಂಡರು ಹೋರಾಟ ತಡೆಯಲಿ:
ಹೇಮಾವತಿ ವಿಚಾರವಾಗಿ ತುಮಕೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದು ಸಂಸದರಾದ ಡಾ. ಮಂಜುನಾಥ್, ಮಾಜಿ ಶಾಸಕ ಎ.ಮಂಜುನಾಥ್ ಅವರು ವಿರೋಧ ಮಾಡುತ್ತಿರುವವರಿಗೆ ಬುದ್ಧಿ ಹೇಳಿ ಕಾಮಗಾರಿ ಮುಂದುವರಿಸುವ ಕೆಲಸ ಮಾಡಬೇಕು. ನೀರು ಎಲ್ಲರಿಗೂ ಸೇರಬೇಕಾದ ಸ್ವತ್ತು. ಸಂಸತ್ ಚುನಾವಣೆಯಲ್ಲಿ ಡಾ. ಮಂಜುನಾಥ್ ಅವರನ್ನು ಗೆಲ್ಲಿಸಿದ್ದು, ತಾಲೂಕಿನ ಜನತೆಗೆ ನ್ಯಾಯ ಕೊಡಿಸುವ ಜವಾಬ್ದಾರಿ ಸಂಸದರ ಮೇಲಿದೆ ಎಂದರು.ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಶಿವಕುಮಾರ್ ಅವರ ನೂತನ ಕಚೇರಿಯನ್ನು ಶಾಸಕ ಬಾಲಕೃಷ್ಣ ಉದ್ಘಾಟಿಸಿದರು. ಪುರಸಭಾಧ್ಯಕ್ಷೆ ರಮ್ಯಾ ನರಸಿಂಹಮೂರ್ತಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
28ಮಾಗಡಿ4 :ಮಾಗಡಿ ಪುರಸಭೆ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಶಿವಕುಮಾರ್ ಅವರ ನೂತನ ಕಚೇರಿಯನ್ನು ಶಾಸಕ ಬಾಲಕೃಷ್ಣ ಉದ್ಘಾಟಿಸಿದರು.