ಚಿತ್ರದುರ್ಗ ಲೋಕಸಭಾ ನನಗೆ ಸಿಗುವ ಟಿಕೆಟ್ ವಿಶ್ವಾಸವಿದೆ: ತಿಪ್ಪೇಸ್ವಾಮಿ
KannadaprabhaNewsNetwork | Published : Oct 06 2023, 01:09 AM IST
ಚಿತ್ರದುರ್ಗ ಲೋಕಸಭಾ ನನಗೆ ಸಿಗುವ ಟಿಕೆಟ್ ವಿಶ್ವಾಸವಿದೆ: ತಿಪ್ಪೇಸ್ವಾಮಿ
ಸಾರಾಂಶ
ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ । ಹಿರಿಯೂರು ಪ್ರವಾಸಿ ಮಂದಿರದಲ್ಲಿ ಸಭೆ
ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ । ಹಿರಿಯೂರು ಪ್ರವಾಸಿ ಮಂದಿರದಲ್ಲಿ ಸಭೆ ಕನ್ನಡಪ್ರಭ ವಾರ್ತೆ ಹಿರಿಯೂರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಥಳಿಯರಿಗೆ ಟಿಕೆಟ್ ನೀಡಬೇಕೆಂಬ ಕೂಗು ಮತ್ತೆ ಮೇಲೆದಿದ್ದು, ತಾಲೂಕು ಕೇಂದ್ರಗಳಲ್ಲಿ ಸಭೆಗಳು ಬಿರುಸಿನಿಂದ ನಡೆದಿವೆ. ಎರಡು ದಿನಗಳ ಹಿಂದೆಯಷ್ಟೇ ಚಳ್ಳಕೆರೆಯಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಭೆ ಮಾಡಿದ್ದೆ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಗುರುವಾರ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು. ನಾನು ಸ್ಥಳೀಯ ಅಭ್ಯರ್ಥಿಯಾಗಿದ್ದು ಬೆಂಬಲಿಸುವಂತೆ ಮನವಿ ಮಾಡಿದರು. ಹಿಂದೊಮ್ಮೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಯವರು ನನ್ನನ್ನು ಕರೆದು ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಟಿಕೆಟ್ ನೀಡಿ, ಚುನಾವಣೆಗೆ ಇಳಿಸಿದ್ದರು. ಕಾಂಗ್ರೆಸ್‌ಗೆ ಪೂರಕ ವಾತಾವರಣ ಇಲ್ಲದ ಕಾರಣ ಅಂದು ಸೋಲನ್ನನುಭವಿಸಬೇಕಾಯಿತು. ಹಾಗಾಗಿ ಈ ಬಾರಿಯ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಿದಲ್ಲಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶ್ರಮದ ಫಲವಾಗಿ ಜನರು ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಕಾಂಗ್ರೆಸ್ ಗೆ ಈ ಬಾರಿಪೂರಕ ವಾತಾವರಣವಿದ್ದು ಮತ್ತೊಮ್ಮೆ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೋರಿದರು. ಸುಮಾರು ತಿಂಗಳುಗಳಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದೇನೆ. ಈ ಬಾರಿ ನೀವೇ ಗೆಲ್ಲುವುದು ಎಂದು ಹೋದಲ್ಲೆಲ್ಲಾ ಜನರು ಹೇಳುತ್ತಿದ್ದಾರೆ. ಹಾಗಾಗಿ ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡುವ ಮತ್ತು ಗೆಲ್ಲುವ ವಿಶ್ವಾಸ ನನಗಿದೆ. ಸ್ಥಳೀಯ ಅಭ್ಯರ್ಥಿಯಾಗಿರುವ ನನಗೇ ಎಲ್ಲರೂ ಬೆಂಬಲಿಸಬೇಕು ಎಂದರು. ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್ ಮಾತನಾಡಿ, ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಜೆಜೆ ಹಟ್ಟಿ ತಿಪ್ಪೇಸ್ವಾಮಿಯವರಿಗೆ ನೀಡಬೇಕು. ಎಲ್ಲಾ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವ ತಿಪ್ಪೇಸ್ವಾಮಿಯವರಿಗೆ ಟಿಕೆಟ್ ಸಿಗುವ ವಿಶ್ವಾಸವಿದೆ. ಜಿಲ್ಲೆಯ ಎಲ್ಲಾ ಶಾಸಕರು ಬಿ.ತಿಪ್ಪೇಸ್ವಾಮಿಯವರಿಗೆ ಟಿಕೆಟ್ ನೀಡಲು ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮೇಟಿಕುರ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಸ್ ಹನುಮಂತಪ್ಪ, ಅಡಿವೆಪ್ಪ, ಮಲ್ಲಪ್ಪ, ಜಗನ್ನಾಥ್, ಕೆ ಮಂಜುನಾಥ್, ರಂಗಸ್ವಾಮಿ, ಓಪಿಟಿ ಸ್ವಾಮಿ, ಬೆಳ್ಳಿ, ಶ್ರೀನಿವಾಸ್, ಶಿವು ಮುಂತಾದವರು ಹಾಜರಿದ್ದರು. ---------------- ಪೋಟೋ ಕ್ಯಾಪ್ಸನ್ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಬೆಂಬಲಿಗರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಮಾತನಾಡಿದರು. ---------ಫೋಟೋ ಫೈಲ್ ನೇಮ್ -5 ಸಿಟಿಡಿ13