ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ

| Published : Aug 07 2025, 12:45 AM IST

ತಂದೆಯ ಮಾರ್ಗದರ್ಶನದಲ್ಲಿ ನಡೆಯುತ್ತಿರುವೆ: ಶಾಸಕ ರಾಜಾ ವೇಣುಗೋಪಾಲ ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಕನ್ನಡಪ್ರಭ ವಾರ್ತೆ ಹುಣಸಗಿ

ನನ್ನ ತಂದೆ, ದಿ. ರಾಜಾ ವೆಂಕಟಪ್ಪನಾಯಕ ಅವರು ಸುರಪುರ ಹಾಗೂ ಹುಣಸಗಿ ತಾಲೂಕು ಅಭಿವೃದ್ಧಿಪಡಿಸಬೇಕೆಂಬ ಕನಸು ಕಾಣುತ್ತಿದ್ದರು. ಅದೇ ರೀತಿಯಲ್ಲಿ, ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾನು ನಡೆಯುತ್ತಿರುವೆ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಪಟ್ಟಣದ ಯುಕೆಪಿ ಕ್ಯಾಂಪಿನ ಹಳೆ ತಹಸೀಲ್ದಾರರ ಕಚೇರಿಯ ಆವರಣದಲ್ಲಿ ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುಣಸಗಿ ಪಟ್ಟಣಕ್ಕೆ ಬೇಕಾಗಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸತತವಾಗಿ ಕಾರ್ಯಕರ್ತರ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರ ಜನ ಪರ ಸರ್ಕಾರವಾಗಿದ್ದು ಬಡವರಿಗೆ ಕೂಲಿಕಾರರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಮಾಡಲಾಗಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಎಚ್ಚರಿಕೆ ವಹಿಸಲಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ ಮಾತನಾಡಿ, ಹಸಿದ ಹೊಟ್ಟೆಗೆ ಊಟ ನೀಡುವ ವ್ಯವಸ್ಥೆ ಇದಾಗಿದೆ. ಗುಣಮಟ್ಟದ ಆಹಾರ ನೀಡುವುದರ ಜತೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಪ್ರತಿ ದಿನ ಬೇರೆ ಬೇರೆ ಉಪಹಾರ ಹಾಗೂ ಊಟವನ್ನು ಸಿದ್ಧಪಡಿಸಿ ನೀಡಲಾಗುತ್ತದೆ. ಕ್ಯಾಂಟೀನ್ ಹತ್ತಿರವೇ ಸರ್ಕಾರಿ ಆಸ್ಪತ್ರೆ ಇದೆ. ಕಾಲೇಜುಗಳು ಇವೆ. ತಹಸೀಲ್ದಾರ ಕಾರ್ಯಾಲಯ ಇದೆ, ಪೊಲೀಸ್ ಠಾಣೆ ಇದ್ದು, ಗ್ರಾಮೀಣ ಭಾಗದ ಬಡಜನರಿಗೆ ಈ ಕ್ಯಾಟೀನ್ ಹೆಚ್ಚು ಆಸರೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ತಹಸೀಲ್ದಾರ ಎಂ.ಬಸವರಾಜ, ಪಟ್ಟಣ ಪಂಚಾಯತ್‌ ಅಧ್ಯಕ್ಷ ತಿಪ್ಪಣ್ಣ ನಾಯಕ, ಕೆಪಿಸಿಸಿ ಸದಸ್ಯ ಸಿದ್ದಣ್ಣ ಸಾಹು ಮಲಗಲದಿನ್ನಿ, ಪಟ್ಟಣ ಪಂಚಾಯತ್‌ ಉಪಾಧ್ಯಕ್ಷ ಶಾಂತಣ್ಣ ಮಲಗಲದಿನ್ನಿ, ಸಿದ್ರಾಮಪ್ಪ ಮುದಗಲ್, ಆರ್. ಎಮ್, ರೇವಡಿ, ಶರಣು ದಂಡಿನ, ಬಾಪೂಗೌಡ ಪಾಟೀಲ್, ಕನಕಪ್ಪ ಸಿದ್ದಾಪೂರ ಮುಂತಾದವರಿದ್ದರು.