ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಎತ್ತರದ ಪ್ರದೇಶವಾಗಿರುವ ಇಟ್ಟಂಗಿಹಾಳಕ್ಕೆ ನೀರು ಹರಿಸುವುದು ಕಷ್ಟಕರ ಹಾಗೂ ಕಷ್ಟಸಾಧ್ಯವಾಗಿರುವುದನ್ನು ಛಲದಿಂದ, ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಸಾಕ್ಷಿಯಾಗಿ ಈ ಪ್ರದೇಶದಲ್ಲಿ ನೀರು ಹರಿಸಿ ಇಟ್ಟಂಗಿಹಾಳ ಕೆರೆ ತುಂಬಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.ತಾಲೂಕಿನ ಇಟ್ಟಂಗಿಹಾಳ ಕೆರೆ ಆವರಣದಲ್ಲಿ ಜಲಸಂಪನ್ಮೂಲ ಇಲಾಖೆಯ ವತಿಯಿಂದ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಇಟ್ಟಂಗಿಹಾಳ ಕೆರೆಗೆ ಶನಿವಾರ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎತ್ತರ ಪ್ರದೇಶವಾದ ಇಟ್ಟಂಗಿಹಾಳ ಹಾಗೂ ಜಾಲಗೇರಿ ಕೆರೆಗಳಿಗೆ ನೀರು ಬರುವುದು ಅತ್ಯಂತ ಕಷ್ಟಕರವಾಗಿತ್ತು. ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಇಟ್ಟಂಗಿಹಾಳ ಕೆರೆ ತುಂಬಿಸಲು ಯೋಜನೆ ರೂಪಿಸಿಕೊಂಡು, ಕಷ್ಟಕರವಾದ ಈ ಕಾರ್ಯವನ್ನು ೧,೧೫೦೦೦ ಎಚ್.ಪಿ. ಸಾಮರ್ಥ್ಯವುಳ್ಳ ೫ ಮೋಟರ್‌ಗಳನ್ನು ಬಳಸಿ, ನೀರನ್ನು ಹರಿಸಿ ಇಟ್ಟಂಗಿಹಾಳ ಕೆರೆಯನ್ನು ತುಂಬಿಸಲಾಗಿದೆ. ಈ ಭಾಗದ ಅಂತರ್ಜಲಮಟ್ಟ ಹೆಚ್ಚಾಗಿ ರೈತರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಕೆರೆಗಳಿಗಿಂತಲೂ ಹೆಚ್ಚು ವಿಸ್ತ್ರೀರ್ಣ ಹೊಂದಿದ ೧೨೦ ಬಾಂದಾರ್‌ಗಳನ್ನು ತುಂಬಿಸಲಾಗಿದೆ. ಇಟ್ಟಂಗಿಹಾಳ ಕೆರೆಯ ಪಕ್ಕದಲ್ಲಿರುವ ೬೦ ಎಕರೆ ಸರ್ಕಾರಿ ಜಮೀನು ಬಳಸಿಕೊಂಡು, ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಇನ್ನಷ್ಟು ಅಭಿವೃದ್ದಿಪಡಿಸಿ ಇಟ್ಟಂಗಿಹಾಳ ಕೆರೆ ವೀಸ್ತೀರ್ಣ ದ್ವಿಗುಣಗೊಳಿಸಿ, ನೀರಿನ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.ತಿಕೋಟಾ ತಾಲೂಕಿನ, ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಬರುವ ೨೧, ಜಿಲ್ಲಾ ಪಂಚಾಯತ್ ವ್ಯಾಪ್ತಿಯ ೦೭, ಗ್ರಾಮ ಪಂಚಾಯತ್ ವ್ಯಾಪ್ತಿಯ ೦೨ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯ ೨ ಕೆರೆಗಳು ಸೇರಿದಂತೆ ಒಟ್ಟು ೩೨ ಕೆರೆಗಳು ಹಾಗೂ ಬಬಲೇಶ್ವರ ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ೧೪, ಜಿಲ್ಲಾ ಪಂಚಾಯತ್ ವ್ಯಾಪ್ತಿಯ ೧೧, ಪಟ್ಟಣ ಪಂಚಾಯತ್ ವ್ಯಾಪ್ತಿಯ ೦೨ ಸೇರಿದಂತೆ ಒಟ್ಟು ೨೭ ಕೆರೆಗಳನ್ನು ತುಂಬಿಸಲಾಗಿದ್ದು, ಈ ಭಾಗದಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಿ ಮಾದರಿ ಜಿಲ್ಲೆಯನ್ನಾಗಿ ರೂಪಿಸಲಾಗುವುದು ಎಂದು ಅವರು ಹೇಳಿದರು. ನೀರಾವರಿಗಷ್ಟೇ ಅಲ್ಲದೇ ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಉತ್ತೇಜನ ನೀಡಲಾಗಿದೆ. ಸಿ.ಎಸ್.ಆರ್. ಅನುದಾನವನ್ನು ಬಳಸಿಕೊಂಡು ಮಕ್ಕಳಿಗೆ ಸ್ಮಾರ್ಟ್ ಕ್ಲಾಸ್, ಆಟದ ಸಾಮಗ್ರಿಗಳನ್ನು ವಿತರಣೆ ಮಾಡುವ ಮೂಲಕ ಶಿಕ್ಷಣಕ್ಕೆ ಪ್ರೊತ್ಸಾಹಿಸಿ, ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಈಗಾಗಲೇ ಅರಕೇರಿ ಎಲ್.ಟಿ.-೩ಯಲ್ಲಿ ಸಿ.ಎಸ್.ಆರ್. ಅನುದಾನ ಬಳಸಿಕೊಂಡು ಪ್ರಾಥಮಿಕ ಶಾಲಾ ಮಕ್ಕಳಿಗೆ ಆಟದ ಸಾಮಾನು ಒದಗಿಸುವ ಮೂಲಕ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗೆ ಪ್ರೊತ್ಸಾಹಿಸಲಾಗುತ್ತಿದೆ ಎಂದರು.
ಗ್ರಾಮದ ಮುಖಂಡರಾದ ವಸಂತ ತಂಗಡಿ, ವಿಠ್ಠಲ ಮುಚ್ಚಂಡಿ, ಗಿರಮಲ್ಲ ಮುಚ್ಚಂಡಿ, ನಾಗಪ್ಪ ತಂಗಡಿ, ಬಾಬು ಗುಲಗಂಜಿ, ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೊಟೆ, ಭೀಮಸಿಂಗ ಮಹಾರಾಜ್, ಸಿದ್ದು ಗೌಡನವರ, ಡಿ.ಆರ್.ನಿಡೋಣಿ, ರಾಜುಗೌಡ ಬಿರಾದಾರ ಹಣಮಂತ ಮುಚ್ಚಂಡಿ, ಬಿ.ಟಿ.ರಾಠೋಡ, ನೀರಾವರಿ ನಿಗಮದ ಎಇಇ ಅಂಬಣ್ಣ ಹರಳಯ್ಯ, ಸಣ್ಣ ನೀರಾವರಿ ಎಇಇ ವಿಜಯ ವಸ್ತ್ರದ, ತಿಕೋಟಾ ತಹಸೀಲ್ದಾರ ಸುರೇಶ ಚವಲರ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಕನ್ನಡಪ್ರಭ ವಾರ್ತೆ ವಿಜಯಪುರಎತ್ತರದ ಪ್ರದೇಶವಾಗಿರುವ ಇಟ್ಟಂಗಿಹಾಳಕ್ಕೆ ನೀರು ಹರಿಸುವುದು ಕಷ್ಟಕರ ಹಾಗೂ ಕಷ್ಟಸಾಧ್ಯವಾಗಿರುವುದನ್ನು ಛಲದಿಂದ, ಮನಸ್ಸಿದ್ದರೆ ಮಾರ್ಗ ಎಂಬುದಕ್ಕೆ ಸಾಕ್ಷಿಯಾಗಿ ಈ ಪ್ರದೇಶದಲ್ಲಿ ನೀರು ಹರಿಸಿ ಇಟ್ಟಂಗಿಹಾಳ ಕೆರೆ ತುಂಬಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಸಚಿವ ಡಾ.ಎಂ.ಬಿ.ಪಾಟೀಲ ಹೇಳಿದರು.