'ನಾನು ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಲ್ಲ :ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ'

| Published : Aug 24 2024, 01:28 AM IST / Updated: Aug 24 2024, 12:09 PM IST

'ನಾನು ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಲ್ಲ :ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ'
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ.  ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದರು.

 ಚನ್ನಪಟ್ಟಣ :  ನಾನು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ. ಉಪಚುನಾವಣೆಯಲ್ಲಿ ಕ್ಷೇತ್ರದಿಂದ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಕ್ಷೇತ್ರ ಜೆಡಿಎಸ್ ಪಾಲಿಗೆ ದೊರೆತಲ್ಲಿ ನೂರಕ್ಕೆ ನೂರರಷ್ಟು ಪಕ್ಷದ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಘೋಷಿಸಿದರು.

ತಾಲೂಕಿನ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ಷೇತ್ರ ಪ್ರವಾಸ ಆರಂಭಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ನಾಳೆಯೆ ಶಾಸಕನಾಗಬೇಕು, ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎಂಬ ನಿರೀಕ್ಷಿ ಇಟ್ಟುಕೊಂಡು ಕೆಲಸ ಮಾಡುತ್ತಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಾದೇಶಿಕ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಕುಮಾರಣ್ಣ ಉಳಿಸಿಕೊಂಡು ಬೆಳೆಸಿಕೊಂಡು ಹೋಗುತ್ತಿದ್ದಾರೆ. ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು ಅಂತ ನನ್ನ ಕೆಲಸ ಆರಂಭಿಸಿದ್ದೇನೆ ಎಂದರು. ಅಂತ ನನ್ನ ಮೇಲೆ ಸಾಕಷ್ಟು ಒತ್ತಡ ಇತ್ತು. ಆದರೆ ನಾನು ಚುನಾವಣೆಗೆ ಸ್ಪರ್ಧೆ ಮಾಡೊ ಸೂಕ್ತ ಸಮಯ ಅಲ್ಲ. ರಾಜ್ಯಾದ್ಯಂತ ಕಾರ್ಯಕರ್ತರ ಜತೆ ಒಡನಾಟ ಬೆಳೆಸಿಕೊಳ್ಳಬೇಕು ಅಂತ ಕೆಲಸ ಆರಂಭಿಸಿದ್ದೇನೆ. ನಾನು ಯಾವುದೇ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ಅಪೇಕ್ಷೆಯೂ ಇಲ್ಲ. ಚನ್ನಪಟ್ಟಣದಲ್ಲಿ ಏನಾದರೂ ಜನತಾದಳದ ಚಿಹ್ನೆ ಅಡಿ ಸ್ಪರ್ಧೆ ಮಾಡಬೇಕು ಅನ್ನುವ ಸಂದರ್ಭ ಬಂದರೆ ನೂರಕ್ಕೆ ನೂರರಷ್ಟು ನಮ್ಮ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದರು.

ಜನರ ಸಮಸ್ಯೆ ಆಲಿಸಲು ಬಂದಿರು

ರಾಜ್ಯದಲ್ಲಿ ಚನ್ನಪಟ್ಟಣ, ಶಿಂಗ್ಗಾವಿ, ಸಂಡೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಬೇಕಿದೆ. ಮೂರು ಕ್ಷೇತ್ರದ ಉಪ ಚುನಾವಣೆ ಬಗ್ಗೆ ಶೀಘ್ರವೇ ದಿನಾಂಕ ಘೋಷಣೆಯಾಗಲಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಕೆರೆಗಳು ಖಾಲಿ ಆಗಿವೆ. ಜತೆಗೆ ಹಲವಾರು ಸಮಸ್ಯೆ ಇವೆ. ಹೀಗಾಗಿ ಜನರ ಸಮಸ್ಯೆ ಆಲಿಸಲು ಬಂದಿದ್ದೇನೆ ಎಂದರು.

ನಾನು ಸ್ಪರ್ಧೆ ಮಾಡುವ ಹಿನ್ನೆಲೆಯಲ್ಲಿ ಇಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಸಾರ್ವತ್ರಿಕ ಚುನಾವಣೆಗೆ ಮೂರು ಮುಕ್ಕಾಲು ವರ್ಷ ಬಾಕಿ ಇದೆ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಲು ಹಾಗೂ ನಾನು ಕೆಲಸ ಮಾಡಲು ಬಂದಿದ್ದೇನೆ. ಮುಂದಿನ ವಾರ ಬೇರೆ ಜಿಲ್ಲಾ ಪ್ರವಾಸದ ಸಮಯ ನಿಗದಿ ಮಾಡಿದ್ದೇನೆ. ಸದ್ಯ ಚನ್ನಪಟ್ಟಣ ಕಾರ್ಯಕರ್ತರ ಭಾವನೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು. ಯೋಗೇಶ್ವರ್ ಬಿಜೆಪಿಯಲ್ಲಿ ಎಂಎಲ್‌ಸಿ ಇದ್ದಾರೆ. ಯೋಗೇಶ್ವರ್ ಅಥವಾ ಕುಮಾರಸ್ವಾಮಿ ಆಗಲಿ ಯಾವುದೇ ಅಪಸ್ವರಕ್ಕೆ ದಾರಿ ಮಾಡಿಕೊಟ್ಟಿಲ್ಲ. ಟಿಕೆಟ್ ವಿಚಾರದಲ್ಲಿ ಅಂತಿಮ ತೀರ್ಮಾನ ದೆಹಲಿ ಮಟ್ಟದಲ್ಲಿ ಆಗಲಿದೆ. ಎಲ್ಲಾ ವಿಚಾರಗಳಿಗೂ ತಲೆ ಭಾಗಿ ಒಳ್ಳೆಯ ತೀರ್ಮಾನಕ್ಕೆ ಬರುತ್ತೇವೆ. ಯೋಗೇಶ್ವರ್ ಅವರನ್ನೂ ಕೂಡ ವಿಶ್ವಾಸವಾಗಿ ತೆಗೆದುಕೊಳ್ಳುತ್ತೇವೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ಮಂಜುನಾಥ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು, ನಗರಾಧ್ಯಕ್ಷ ಅಜಯ್, ಒಕ್ಕಲಿಗರ ಸಂಘದ ನಿರ್ದೇಶಕ ಹಾಪ್‌ಕಾಮ್ಸ್ ದೇವರಾಜು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಕುಕ್ಕೂರುದೊಡ್ಡಿ ಜಯರಾಮು ಇತರರು ಇದ್ದರು.ಚನ್ನಪಟ್ಟಣ ಕ್ಷೇತ್ರದ ವರದಿ ಶೀಘ್ರ ಬಿಜೆಪಿ ನಾಯಕರಿಗೆಚನ್ನಪಟ್ಟಣ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಲಾಗಿದೆ. ಆ ವರದಿಯನ್ನು ಬಿಜೆಪಿ ರಾಷ್ಟ್ರೀಯ ನಾಯಕರ ಗಮನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತರಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇದರ ಜತೆಗೆ ಶೀಘ್ರದಲ್ಲೇ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಮುಖಂಡರ ಜತೆ ಚರ್ಚೆ ಮಾಡಲು ಬಂದಿದ್ದೇನೆ ಎಂದರು. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು ಹೀಗಾಗಿ ತಳಮಟ್ಟದಿಂದ ಎರಡೂ ಪಕ್ಷದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ. ಕ್ಷೇತ್ರಕ್ಕೆ ಸಂಬಂಧಿಸಿದಂತೆ ವರದಿ ಸಿದ್ದಪಡಿಸಿದ್ದೇವೆ. ಆ ವರದಿಯನ್ನ ಕುಮಾರಸ್ವಾಮಿ ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತಾರೆ ಎಂದರು.