ನಾನು ರಾಜಕಾರಣಿಯಲ್ಲ, ರಾಷ್ಟ್ರಕಾರಣಿ: ಡಾ.ಸಿ.ಎನ್‌.ಮಂಜುನಾಥ್

| Published : Mar 23 2024, 01:02 AM IST

ನಾನು ರಾಜಕಾರಣಿಯಲ್ಲ, ರಾಷ್ಟ್ರಕಾರಣಿ: ಡಾ.ಸಿ.ಎನ್‌.ಮಂಜುನಾಥ್
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ನನ್ನನ್ನು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ನಾನು ರಾಜ ಕಾರಣಿಯಾಗುವುದಕ್ಕಿಂತ ರಾಷ್ಟ್ರಕಾರಣಿ ಆಗಲು ಇಷ್ಟಪಡುತ್ತೇನೆ. ಮುಂದಿನ ದಿನಗಳಲ್ಲಿ ದೇಶ ಹಾಗೂ ಯುವ ಜನತೆಯ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಕುಣಿಗಲ್ಬಿಜೆಪಿ ಮತ್ತು ಜೆಡಿಎಸ್ ವರಿಷ್ಠರು ನನ್ನನ್ನು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ನಾನು ರಾಜ ಕಾರಣಿಯಾಗುವುದಕ್ಕಿಂತ ರಾಷ್ಟ್ರಕಾರಣಿ ಆಗಲು ಇಷ್ಟಪಡುತ್ತೇನೆ. ಮುಂದಿನ ದಿನಗಳಲ್ಲಿ ದೇಶ ಹಾಗೂ ಯುವ ಜನತೆಯ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ.ಸಿ.ಎನ್‌.ಮಂಜುನಾಥ ತಿಳಿಸಿದ್ದಾರೆ, ಪಟ್ಟಣದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಮಿತ್ ಶಾ, ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನನ್ನು ಗುರುತಿಸಿ ಬೆಂಗಳೂರು ಗ್ರಾಮಾಂತರ ಅಭ್ಯರ್ಥಿಯಾಗಿ ತೀರ್ಮಾನಿಸಿದ್ದಾರೆ. ನಾನು ಲಕ್ಷಾಂತರ ಹೃದಯಗಳ ಜೊತೆ ಕೆಲಸ ಮಾಡಿರುವ ಅನುಭವವಿದೆ ಎಂದಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲೂ ಕೂಡ ಕೆಲಸ ಮಾಡಿದ್ದೇನೆ. ಸಣ್ಣ ಸಂಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳು ವಂತೆ ಕಾರ್ಯನಿರ್ವಹಿಸಿದ ಅನುಭವ ನನಗಿದೆ. ರಾಜಕಾರಣಿಗಳಿಗಿಂತ ಮಹತ್ತರವಾದ ದೊಡ್ಡ ಕೆಲಸ ರಾಷ್ಟ್ರಕಾರಣಿ ಆಗು ವುದು. ನಾನು ಮುಂದಿನ ದಿನಗಳಲ್ಲಿ ರಾಷ್ಟ್ರಕಾರಣಿಯಾಗಿ ದೇಶದ ಅಭಿವೃದ್ಧಿ ಮಾಡುವುದಕ್ಕೆ ಬಯಸುತ್ತೇನೆ ಎಂದರು. ಕುಣಿಗಲ್ ಜೆಡಿಎಸ್ ಮುಖಂಡ ಡಿ.ನಾಗರಾಜಯ್ಯ ಹಾಗೂ ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್ ಒಂದಾಗಿರುವುದು ಕುಣಿಗಲ್‌ಗೆ ಸಂತಸದ ವಿಚಾರ. ಎರಡು ಮನಸುಗಳಿಗೆ ಸೇತುವೆ ಆಗುವ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕುಣಿಗಲ್ ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ತಂದೆಗೆ ಇದ್ದ ಹೃದಯ ಸಮಸ್ಯೆಯಿಂದ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ಆಗಿದೆ. ಅವರು ಮುಂದಿನ ದಿನಗಳಲ್ಲಿ ನಿಮ್ಮ ಗ್ರಾಮಗಳಿಗೆ ಬರಲೆಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ. ಪ್ರತಿಯೊಬ್ಬರೂ ಕೂಡ ಕುಮಾರಸ್ವಾಮಿಯವರ ಜವಾಬ್ದಾರಿ ತೆಗೆದುಕೊಂಡು ನಿಮ್ಮ ಊರಿನಲ್ಲಿ ಮಂಜುನಾಥ್ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.

ಈ ಬಾರಿ ರಾಜ್ಯದಲ್ಲಿ ವಿಶೇಷವಾದ ಅಭ್ಯರ್ಥಿ ಆಗಿರುವ ಡಾ.ಮಂಜುನಾಥ್ ಅವರನ್ನು ಅತಿ ಹೆಚ್ಚು ಅಂತರದಿಂದ ಗೆಲ್ಲಿಸಬೇ ಕಾಗಿರುವಂತಹ ಜವಾಬ್ದಾರಿ ನಿಮ್ಮ ಮೇಲಿದೆ. ಅಂತಹ ಉತ್ತಮ ಹೃದಯವಂತರಿಗೆ ಮತ ನೀಡುವ ಮೂಲಕ ಆಶೀರ್ವದಿಸಿ ಎಂದರು.

ಈ ಸಂದರ್ಭದಲ್ಲಿ ಮಾಗಡಿಯ ಮಾಜಿ ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಆ ದೇವೇಗೌಡ, ಮಾಜಿ ಸಚಿವ ಡಿ.ನಾಗರಾಜಯ್ಯ, ಡಾ.ರವಿ, ಡಿ.ನಾಗರಾಜಯ್ಯ, ಬಿ.ಎನ್.ಜಗದೀಶ್, ತಾಪಂ ಮಾಜಿ ಅಧ್ಯಕ್ಷ ಹರೀಶ್ ನಾಯಕ್, ಪುರಸಭಾ ಮಾಜಿ ಅಧ್ಯಕ್ಷ ಕೆ.ಎಲ್. ಹರೀಶ್ ಪ್ರಕಾಶ್ ಸೇರಿದಂತೆ ಇತರರು ಇದ್ದರು