ಚನ್ನಪಟ್ಟಣ: ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿರುವುದು ಸಂತಸ ತಂದಿದೆ. ಪಕ್ಷದ ವರಿಷ್ಠರು ಅವಕಾಶ ಕೊಡುತ್ತಿರುವುದಕ್ಕೆ ಸಂತೋಷವಾಗಿದೆ. ಅವರ ದಶಕಗಳ ಪರಿಶ್ರಮಕ್ಕೆ ಫಲ ಸಿಗುತ್ತಿದೆ. ಇದರಿಂದ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಆಗಲು ಅನುಕೂಲಕರವಾಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಸಂತಸ ವ್ಯಕ್ತಪಡಿಸಿದರು

ಚನ್ನಪಟ್ಟಣ: ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತಿರುವುದು ಸಂತಸ ತಂದಿದೆ. ಪಕ್ಷದ ವರಿಷ್ಠರು ಅವಕಾಶ ಕೊಡುತ್ತಿರುವುದಕ್ಕೆ ಸಂತೋಷವಾಗಿದೆ. ಅವರ ದಶಕಗಳ ಪರಿಶ್ರಮಕ್ಕೆ ಫಲ ಸಿಗುತ್ತಿದೆ. ಇದರಿಂದ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಆಗಲು ಅನುಕೂಲಕರವಾಗಲಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಸಂತಸ ವ್ಯಕ್ತಪಡಿಸಿದರು.

ನಗರದ ಶಾಸಕರ ಗೃಹಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಪದಗ್ರಹಣ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಂದವನು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಾಧಾರಣವಾಗಿ ನಮ್ಮದು ಚಿಕ್ಕ ಜಿಲ್ಲೆ, ಡಿಕೆಶಿ ಅವರೇ ಸಿಎಂ ಇರುವಾಗ ಮತ್ತೊಂದು ಮಂತ್ರಿ ಸ್ಥಾನ ಸಿಗೋದು ಡೌಟು. ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿ ಇರುವಾಗ ನಾನು ಸಚಿವ ಸ್ಥಾನ ಕೇಳೋದು ಸಮಂಜಸ ಅಲ್ಲ. ಏನೇ ಅಭಿವೃದ್ಧಿ ಬೇಕಾದ್ರೂ ಸಿಎಂ ಅವರನ್ನ ಕೇಳಿ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.

ನಮ್ಮ ತಾಲೂಕಿನಲ್ಲಿ ಬಹಳಷ್ಟು ಸಮಸ್ಯೆ ಇದೆ. ನೀರಾವರಿ, ರಸ್ತೆ ಹಾಗೂ ಬಸ್ ನಿಲ್ದಾಣ ಸೇರಿ ಹಲವು ಕೆಲಸ ಆಗಬೇಕು. ಡಿಕೆಶಿ ಸಿಎಂ ಆಗುವುದರಿಂದ ನಮಗೆ ಮತ್ತಷ್ಟು ಶಕ್ತಿ ಸಿಕ್ಕಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ನಮ್ಮ ತಾಲೂಕಿನಿಂದ ೨೦೦ ಬಸ್ ವ್ಯವಸ್ಥೆ ಮಾಡುತ್ತಿದ್ದೇವೆ. ಸುಮಾರು ೨೦ ಸಾವಿರ ಜನ ಕರೆದೊಯ್ಯುಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದರು.

ಪೊಟೋ೩೦ಸಿಪಿಟಿ೧: ಚನ್ನಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಆಯೋಜಸಿದ್ದ ಪೂರ್ವಭಾವಿ ಸಭೆಯಲ್ಲಿ ಶಾಸಕ ಸಿ.ಪಿ.ಯೋಗೇಶ್ವರ್ ಮಾತನಾಡಿದರು.