ಆರೋಗ್ಯ ಜಾಗೃತಿಗೆ ಐ ಆ್ಯಮ್ ಒನ್ ಹೆಲ್ತ್‌ ಕಾರ್ಯಕ್ರಮ

| Published : Jul 06 2024, 01:15 AM IST / Updated: Jul 06 2024, 10:35 AM IST

ಸಾರಾಂಶ

ನಗರದ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ (ವಿಐಟಿಎಂ) ಶುಕ್ರವಾರ ಆಯೋಜಿಸಿದ್ದ ‘ಐ ಆ್ಯಮ್ ಒನ್‌ ಹೆಲ್ತ್’ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

  ಬೆಂಗಳೂರು :  ಡೆಂಘೀ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಬಿಬಿಎಂಪಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕೈಗಾರಿಕೆ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ (ವಿಐಟಿಎಂ) ಶುಕ್ರವಾರ ಆಯೋಜಿಸಿದ್ದ ‘ಐ ಆ್ಯಮ್ ಒನ್‌ ಹೆಲ್ತ್’ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಮನೆ, ವಾಸಸ್ಥಳಗಳು ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸೇರಿದಂತೆ ಇನ್ನಿತರ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ಇಡೀ ದಿನ ನಡೆದ ಸಂವಾದ, ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ವೈದ್ಯರು, ವಿಷಯ ತಜ್ಞರು ಉತ್ತರಿಸಿದರು.

ಅಶೋಕ ಟ್ರಸ್ಟ್ ಫಾರ್ ರಿಸರ್ಚ್ ಇನ್ ಎಕಾಲಜಿ ಆ್ಯಂಡ್ ಎನ್ವಿರಾನ್ಮೆಂಟ್, ನ್ಯಾಷನಲ್ ಸೆಂಟರ್ ಫಾರ್ ಬಯಾಲಜಿಕಲ್ ಸೈನ್ಸಸ್, ಟಾಟಾ ಇನ್ಸ್‌ಟಿಟ್ಯೂಟ್ ಫಾರ್ ಜೆನೆಟಿಕ್ಸ್ ಆ್ಯಂಡ್ ಸೊಸೈಟಿ ಸೇರಿದಂತೆ 12ಕ್ಕೂ ಹೆಚ್ಚು ಸಂಸ್ಥೆಗಳ ಹಾಕಿದ್ದ ಮಳಿಗೆಗಳಲ್ಲಿ ಮಕ್ಕಳಿಗೆ ನೈರ್ಮಲ್ಯ, ಸ್ವಚ್ಛತೆ, ಆರೋಗ್ಯದ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.