ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಾಂಕ ಸಭೆ ನಡೆಸಿ, ಆಣೆ-ಪ್ರಮಾಣ ಮಾಡುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಸ್ವಾಗತಿಸುವ ಜೊತೆಗೆ ಆಣೆ-ಪ್ರಮಾಣಕ್ಕೆ ನಾನೂ ಸಿದ್ಧನಿದ್ದೇನೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

- ವಿಪ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ವಿರುದ್ಧ ಕ್ರಮವಾಗಲಿ

- - -

ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಆರೋಪ ಕೇಳಿ ಬಂದ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಾಂಕ ಸಭೆ ನಡೆಸಿ, ಆಣೆ-ಪ್ರಮಾಣ ಮಾಡುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಸ್ವಾಗತಿಸುವ ಜೊತೆಗೆ ಆಣೆ-ಪ್ರಮಾಣಕ್ಕೆ ನಾನೂ ಸಿದ್ಧನಿದ್ದೇನೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ ಹೇಳಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ, ಅಡ್ಡ ಮತದಾನ ಮಾಡಿದವರು ಯಾರೆಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ಶೀಘ್ರವೇ ಅಡ್ಡ ಮತ ಚಲಾಯಿಸಿದವರು ಯರೆಂಬುದು ಸಹ ಬಯಲಾಗಲಿದೆ. ತಪ್ಪಿತಸ್ಥರ ವಿರುದಧ ಪಕ್ಷದ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಬೇಕು. ಆದರೆ, ಯಾವುದೇ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು. ಸಾಕ್ಷ್ಯಾಧಾರಗಳ ಮೇಲೆ ಮಾತ್ರವೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ನಾಯಕತ್ವ ಬದಲಾವಣೆ ಬಗ್ಗೆ ಹಿಂದೆ ಭಿನ್ನಮತ ವ್ಯಕ್ತಪಡಿಸಿದ್ದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, 6 ತಿಂಗಳಿನಿಂದ ಯಾವುದೇ ಭಿನ್ನಮತೀಯ ಚಟುವಟಿಕೆಗಳು ನಡೆದಿಲ್ಲ. ಪಕ್ಷದ ವರಿಷ್ಠರ ನಿರ್ದೇಶನಕ್ಕಾಗಿ ಕಾಯುತ್ತಿದ್ದು, ಪಕ್ಷದ ಬೆಳವಣಿಗೆಗಾಗಿ ಎಲ್ಲರೂ ಸತ್ಯ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇವೆ. ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ, ತಾವು ಸಹ ನಾಯಕತ್ವದ ವಿರುದ್ಧ ಧ್ವನಿ ಎತ್ತಿದ್ದು ನಿಜ. ಯತ್ನಾಳರನ್ನು ಪಕ್ಷದ ಪರ ಮತ ಚಲಾಯಿಸಲು ಮನವೊಲಿಸಿ, ಸಫಲರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

- - -

(ಕೋಟ್‌)

ಮೇಲ್ಮನೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಯಾರೇ ಆಗಿದ್ದರೂ ಅಂತಹವರಿಗೆ ಶಿಕ್ಷವೇ ಶಿಕ್ಷೆಯಾಗಬೇಕು. ಪಕ್ಷವನ್ನು ಕಟ್ಟಲು ಶ್ರಮಿಸಿದ ಲಿಂಗರಾಜ ಪಾಟೀಲ ಹಾಗೂ ರಘು ಕೌಟಿಲ್ಯರಿಗೂ ಅನ್ಯಾಯವಾಗಬಾರದು. ಕಷ್ಟದ ಸಮಯದಲ್ಲಿ ಕುತ್ತಿಗೆ ಹಿಸುಕಬೇಡಿ ಎಂಬ ಕೇಂದ್ರ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ, ಅಭಿಪ್ರಾಯ ಸಮಂಜಸವಾಗಿದೆ.

- ಬಿ.ಪಿ.ಹರೀಶ, ಶಾಸಕ, ಹರಿಹರ ಕ್ಷೇತ್ರ.

- - -