ರಾಮನಗರ: ನನ್ನನ್ನು ಮಂತ್ರಿಯನ್ನಾಗಿ ಮಾಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಋಣವನ್ನು ನಾನು ಸಾಯುವವರೆಗೂ ತೀರಿಸಲಾಗದು ಎಂದು ನೂತನ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು
ರಾಮನಗರ: ನನ್ನನ್ನು ಮಂತ್ರಿಯನ್ನಾಗಿ ಮಾಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಋಣವನ್ನು ನಾನು ಸಾಯುವವರೆಗೂ ತೀರಿಸಲಾಗದು ಎಂದು ನೂತನ ಸಚಿವ ಎಚ್.ಸಿ.ಬಾಲಕೃಷ್ಣ ಹೇಳಿದರು.
ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಪ್ರಯುಕ್ತ ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಲ್ಲಿ ನಾನಲ್ಲ, ಇಕ್ಬಾಲ್ ಹುಸೇನ್ ಅವರೇ ಮಂತ್ರಿ. ನಾನು ಮಂತ್ರಿ, ಶಾಸಕ ಎಂಬುದನ್ನು ಮರೆತು ಜಿಲ್ಲೆಯ ಮೂವರು ಶಾಸಕರು ಒಟ್ಟಾಗಿ ಪಣತೊಟ್ಟು ಡಿಕೆಶಿರವರ ಕೈ ಬಲಪಡಿಸಿ, ಅಭಿವೃದ್ಧಿ ಕೆಲಸ ಮಾಡುತ್ತೇವೆ ಎಂದರು.ಈ ಜಿಲ್ಲೆಯ ಮಣ್ಣಿನ ಮಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಚಾಮುಂಡಿ ತಾಯಿ ಹರಸಿ, ಆಶೀರ್ವಾದಿಸಿದ್ದಾಳೆ. ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಅವರು ಅಭಿಮಾನ ಮತ್ತು ಬದ್ಧತೆ ಇಟ್ಟುಕೊಂಡಿದ್ದಾರೆ. ಡಿಕೆ ಸಹೋದರರ ನೇತೃತ್ವದಲ್ಲಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇವೆ ಎಂದು ಬಾಲಕೃಷ್ಣ ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಬೇಳೂರು ಗೋಪಾಲಕೃಷ್ಣ, ಉದಯ್ , ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ರಾಮೋಜಿಗೌಡ, ಸುಧಾಮ್ ದಾಸ್ , ಮಾಜಿ ಶಾಸಕ ಎಂ.ಸಿ.ಅಶ್ವತ್ಥ್ , ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಮುಖಂಡ ದುಂತೂರು ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.5ಕೆಆರ್ ಎಂಎನ್ 3.ಜೆಪಿಜಿ
ನೂತನ ಸಚಿವ ಬಾಲಕೃಷ್ಣ ಅವರನ್ನು ಶಾಸಕ ಇಕ್ಬಾಲ್ ಹುಸೇನ್ ಅಭಿನಂದಿಸಿದರು.