ಸಾರಾಂಶ
ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್‌ನ ಜೀಪಿನಲ್ಲಿ ಸಫಾರಿ ಮಾಡುವಾಗ ಅವರ ಕಣ್ಣಿಗೆ ಹುಲಿ ಕಾಣಿಸಿಕೊಂಡಿದ್ದು ವಿಶೇಷ.
ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಅರಣ್ಯ ಪ್ರದೇಶದಲ್ಲಿ ಸಫಾರಿ ಮಾಡುವ ಮೂಲಕ ತಮ್ಮ 63ನೇ ಜನ್ಮದಿನವನ್ನು ಆಚರಿಸಿಕೊಂಡರು. ಈ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಕಬಿನಿಯಲ್ಲಿ ಕಾಲ ಕಳೆಯುವ ಮೂಲಕ ಆಚರಿಸಿದೆ. ಪ್ರಕೃತಿಯೊಂದಿಗೆ ಒಂದಾದ ಭಾವ, ಕಬಿನಿಯ ಸೌಂದರ್ಯ, ಸಂಪತ್ತನ್ನು ಕಣ್ತುಂಬಿಕೊಂಡು, ಪ್ರಶಾಂತವಾದ ಜಗತ್ತಿಗೆ ಕಾಲಿಟ್ಟ ಅನುಭವಾಯಿತು ಎಂದು ತಮ್ಮ ಫೇಸ್ ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್‌ನ ಜೀಪಿನಲ್ಲಿ ಸಫಾರಿ ಮಾಡುವಾಗ ಅವರ ಕಣ್ಣಿಗೆ ಹುಲಿ ಕಾಣಿಸಿಕೊಂಡಿದ್ದು ವಿಶೇಷ.